ಹುಬ್ಬಳ್ಳಿ: ಈ ಹಿಂದೆ ನೋ ಹೆಲ್ಮೆಟ್ ನೋ ಪೆಟ್ರೋಲ್ ಅಭಿಯಾನ ಆರಂಭಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಈಗ ನೋ ಮಾಸ್ಕ್ ನೋ ಪೆಟ್ರೋಲ್ ಎನ್ನುವ ಅಭಿಯಾನ ಆರಂಭಿಸಿ, ಕೊರೊನಾ ಬಗ್ಗೆ ಜನರಲ್ಲಿ ವಿನೂತನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ.
ಹೌದು ಮಹಾಮಾರಿ ಕೊರೊನಾ ಎಲ್ಲೆಡೆ ಹರಡುತ್ತಿರುವುದರಿಂದ ಸರ್ಕಾರ, ಸಂಘ-ಸಂಸ್ಥೆಗಳು ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿವೆ. ಕೋವಿಡ್-19 ಹರಡವುದನ್ನು ತಪ್ಪಿಸಲು ಸಾರ್ವಜನಿಕರು ಮಾಸ್ಕ್ ಧರಿಸುವಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ನಗರದ ಪೆಟ್ರೋಲ್ ಬಂಕ್ ಮಾಲೀಕರು ಮಾಸ್ಕ್ ಹಾಕಿಕೊಂಡು ಬಂದವರಿಗೆ ಮಾತ್ರ ಪೆಟ್ರೋಲ್ ಎನ್ನುವ ಸಂದೇಶ ನೀಡಿದ್ದಾರೆ.
ನಗರದ ಪೆಟ್ರೋಲ್ ಬಂಕ್ಗಳಲ್ಲಿ ನೋ ಮಾಸ್ಕ್ , ನೋ ಪೆಟ್ರೋಲ್ ಎನ್ನುವ ನಾಮಫಲಕ ಹಾಕಲಾಗಿದೆ. ಮಾಸ್ಕ್ ಹಾಕಿಕೊಳ್ಳುವಂತೆ ಪೆಟ್ರೋಲ್ ಬಂಕ್ ಮಾಲೀಕರು ಮಾಡುತ್ತಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.