ಹುಬ್ಬಳ್ಳಿ: ಇಂದು ಶಾಸಕ ಸಿ.ಎಂ.ನಿಂಬಣ್ಣನವರ ಮನೆ ಮುಂದೆ ಜಮಾಯಿಸಿದ ನೂರಾರು ಜನರು ದಿನಸಿ ಕಿಟ್ ನೀಡುವಂತೆ ಒತ್ತಾಯಿಸಿದರು.
ಕಲಘಟಗಿ ಮತಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣವರ ಮನೆ ಮುಂದೆ ಇಂದು ಜನ ಸಮೂಹವೇ ಸೇರಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಶಾಸಕರ ಮುಂದೆ ಜಮಾಯಿಸಿದ ನೂರಾರು ಜನರು ಆಹಾರ ಕಿಟ್ ನೀಡುವಂತೆ ಒತ್ತಾಯಿಸಿದರು.
ಕೊರೊನಾ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಎಂದು ಎಷ್ಟೇ ಹೇಳಿದರೂ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ.