ಧಾರವಾಡ: ಐಟಿಐ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ ಮತ್ತು ಆನ್ಲೈನ್ ಪರೀಕ್ಷೆ ಕೈಬಿಡುವಂತೆ ಆಗ್ರಹಿಸಿ ಎಐಡಿವೈಒ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಧಾರವಾಡದ ಕಡಪಾ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೆಲಹೊತ್ತು ಪ್ರತಿಭಟಿಸಿ, ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದಿಂದ ತೊಂದರೆಯಾಗಿದೆ. ಸರ್ಕಾರ ಡಿಜಿಟಲ್ ಹೊಸ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಲು ಸುತ್ತೋಲೆ ಹೊರಡಿಸಿರುವುದು ಖಂಡನೀಯ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.