ETV Bharat / state

ಹುಬ್ಬಳ್ಳಿ: ಮನೆಯಲ್ಲಿ ಜಗಳ ಮಾಡಿಕೊಂಡು ಬಂದವ ಮಟನ್ ಶಾಪ್​ನಲ್ಲಿ ಹೆಣವಾದ - ಮಾಂಸದ ಅಂಗಡಿಯಲ್ಲೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತ

ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿನ ಸಂಬಂಧಿಕರ ಮನೆಗೆ ಬಂದಿದ್ದ ವ್ಯಕ್ತಿ ಮಟನ್ ಶಾಪ್​ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ.

person-found-dead-in-hubballi
ಹುಬ್ಬಳ್ಳಿ: ಮನೆಯಲ್ಲಿ ಜಗಳ ಮಾಡಿಕೊಂಡು ಬಂದವ ಮಟನ್ ಶಾಪ್​ನಲ್ಲಿ ಹೆಣವಾದ
author img

By

Published : Oct 13, 2022, 5:08 PM IST

ಹುಬ್ಬಳ್ಳಿ: ಮಾಂಸದ ಅಂಗಡಿಯಲ್ಲೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಇಲ್ಲಿನ ಬಾಣತಿಕಟ್ಟೆಯ ಮೆಹಬೂಬ್​​ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಸವದತ್ತಿ ತಾಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ.

ಅಸ್ಫಾಕ್ ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ. ಆದರೆ, ಸಂಬಂಧಿಯ ಮಟನ್ ಶಾಪ್​ನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಮೃತಪಟ್ಟ ರೀತಿಯಲ್ಲಿ ರಕ್ತಸಿಕ್ತವಾಗಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ಇದೆ. ಮೃತ ಅಸ್ಪಾಕ್ ಅವರ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿ: ಸುತ್ತಿಗೆಯಿಂದ ತಲೆಗೆ ಹೊಡೆದು ವ್ಯಕ್ತಿಯ ಬರ್ಬರ ಕೊಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.