ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ಅವಕಾಶ ನೀಡಿದ್ದು, ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪರ ವಿರೋಧ ಚರ್ಚೆಯ ನಡುವೆ ಮೇಯರ್ ಈರೇಶ ಅಂಚಟಗೇರಿ ಅವರು ಸದನ ಸಮಿತಿ ರಚಿಸಿದ್ದರು. ಸಮಿತಿ ವರದಿ ಆಧರಿಸಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸೋಮವಾರ ರಾತ್ರಿ ಪಾಲಿಕೆ ಪರವಾನಗಿ ನೀಡಿತ್ತು.
ಆದರೆ ಸದನ ಸಮಿತಿ ವರದಿ ಮತ್ತು ಪಾಲಿಕೆಯ ಆದೇಶ ಪ್ರಶ್ನಿಸಿ ಸಾಧಿಕ್ ಗುಡವಾಲಾ ಅವರು ದಾವೆ ಹೂಡಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.
(ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ: ಮೂರು ದಿನ ಗಣೇಶೋತ್ಸವ ಆಚರಣೆಗೆ ಅವಕಾಶ)