ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆ ಪ್ರಚಾರದ ಬಿಸಿ ಏರುತ್ತಲೇ ಇತ್ತ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮಾಜಿ ಸಚಿವರ ಆಪ್ತ ಸಹಾಯಕರೊಬ್ಬರ ಜೇಬಿನಿಂದಲೇ ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ.
ಕುಂದಗೋಳ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ಪರ ಅದರಗುಂಚಿ ಗ್ರಾಮದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದಾಗ ಮಾಜಿ ಸಚಿವರ ಆಪ್ತ ಸಹಾಯಕನ ಜೇಬಿಗೆ ಕತ್ತರಿ ಹಾಕಿ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.
ಖದೀಮರು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಆಪ್ತ ಸಹಾಯಕನ ಜೇಬಿಗೆ ಕತ್ತರಿ ಹಾಕಿದ್ದು, ಜೇಬಿನಲ್ಲಿದ್ದ 50 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ ಪೋಲಿಸರು ಸ್ಥಳದಲ್ಲಿದ್ದರೂ ಕೂಡಾ ಕಳ್ಳರು ತಮ್ಮ ಕೈಚಳಕ ತೋರಿಸಿ ಪರಾರಿಯಾಗಿದ್ದಾರೆ.