ಧಾರವಾಡ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಖಾಸಗಿ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹುಬ್ಬಳ್ಳಿ, ಧಾರವಾಡ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ 49 ಲಕ್ಷ ರೂ. ಹಣ ಜಪ್ತಿ ಮಾಡಿ, 56 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಸ್ಪೀಟ್ ಅಡ್ಡೆ ನಡೆಯುತ್ತಿದ್ದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 66 ಮೊಬೈಲ್, 34 ವಿವಿಧ ವಾಹನಗಳನ್ನೂ ಜಪ್ತಿ ಮಾಡಿದ್ದಾರೆ. ದಾಳಿಯಲ್ಲಿ ಪ್ರಮುಖ ರಾಜಕೀಯ ನಾಯಕರು ಹಾಗೂ ಉದ್ಯಮಿಗಳು ಸಿಕ್ಕಿಬಿದ್ದಿದ್ದಾರೆ ಎನ್ನಲಾಗ್ತಿದೆ.