ಹುಬ್ಬಳ್ಳಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಕಲಘಟಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ನಾಗಪ್ಪ ಉಣಕಲ್ (50) ಬಂಧಿತ ಆರೋಪಿ. ಈತ ಕಲಘಟಗಿ-ಮುಂಡಗೋಡ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರುಮಾಲು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ 504 ಗ್ರಾಂ ಗಾಂಜಾ ಬೀಜ ಹಾಗೂ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಲಘಟಗಿ ಠಾಣೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.