ಧಾರವಾಡ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳಿಯಾಳ ರಸ್ತೆಯ ಸಲಕಿನಕೊಪ್ಪ ಗ್ರಾಮದ ಬಳಿ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು 72 ಗಂಟೆಗಳ ಅವಧಿಯೊಳಗೆ ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೆಪ್ಟೆಂಬರ್ 25ರಂದು ದಾಂಡೇಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕಾರಿನಲ್ಲಿ ಹೊರಟಿದ್ದ ಶ್ಯಾಮ್ ಸುಂದರ ದೇವರಾಜ ನರಸಿಂಹಲು ಮೈತಕುರಿ ಎಂಬುವರನ್ನು ಸಲಕಿನಕೊಪ್ಪದ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಸುಬ್ರಮಣ್ಯ ಗೋಪಿ ಸಮರೂ, ರಾಜೇಶ ರಾಜು ರುದ್ರಪಾಟಿ ಮತ್ತು ಗೌರೀಶ ಉಳವಪ್ಪ ಸುಳ್ಳದ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.