ETV Bharat / state

ಮಾರುವೇಷದಲ್ಲಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ - Hubli crime latest news

ಹುಬ್ಬಳ್ಳಿ- ಧಾರವಾಡದಲ್ಲಿ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

Marijuana accused
Marijuana accused
author img

By

Published : Sep 26, 2020, 5:49 PM IST

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಡಿಗೇರಿ ಠಾಣೆ ಪೊಲೀಸರು, ಕಳೆದೆರಡು ದಿನಗಳಿಂದ ಗ್ರಾಹಕರ ಸೋಗಿನಲ್ಲಿ ನಗರ ಸುತ್ತುತ್ತಿದ್ದರು. ಇಂದು ಪೊಲೀಸರು ಬಲೆಗೆ ಆರೋಪಿಗಳು ಬಿದ್ದಿದ್ದಾರೆ.

ಬಂಧಿತರು ಹುಬ್ಬಳ್ಳಿಯ ವೀರಾಪುರ ಓಣಿ, ಗಣೇಶಪೇಟೆ ಹಾಗೂ ಸೆಟ್ಲಮೆಂಟಿನ ನಿವಾಸಿಗಳೆಂದು ತಿಳಿದು ಬಂದಿದೆ. ಇವರಿಂದ ಸುಮಾರು ಒಂದು ಕೆಜಿಗೂ ಹೆಚ್ಚು ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಡಿಗೇರಿ ಪೊಲೀಸರ ಈ ಕಾರ್ಯಾಚರಣೆ ಮತ್ತಷ್ಟು ದಂಧೆಕೋರರಲ್ಲಿ ನಡುಕ ಹುಟ್ಟಿಸಿದ್ದು, ಗಾಂಜಾ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ಚಳಿ ಬಿಡಿಸಿದಂತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.