ಹುಬ್ಬಳ್ಳಿ: ಮೊಬೈಲ್ ಕಳ್ಳತನ ಮಾಡಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಅಬೀದ್ ಅಲಿ ಖಲಾಸಿ ಬಂಧಿತ ಆರೋಪಿ. ಆರೋಪಿಯಿಂದ ಸುಮಾರು 53 ಸಾವಿರ ಮೌಲ್ಯದ ಬೇರೆ ಬೇರೆ ಕಂಪನಿಯ ಮೊಬೈಲ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜನರ ಮೊಬೈಲ್ ಎಗರಿಸಿ ಪರಾರಿಯಾಗುತ್ತಿದ್ದ. ಹುಲಗೂರು, ಶಿಗ್ಗಾಂವ್, ಹುಬ್ಬಳ್ಳಿ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಬಿ.ಕೆ. ಹೂಗಾರ ತಿಳಿಸಿದರು.
ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಶಪಡಿಸಿಕೊಂಡಿರುವ ಮೊಬೈಲ್ಗಳ ಮಾಲೀಕರನ್ನು ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸ್ ಇಲಾಖೆ ಕೈಗೊಂಡಿದೆ.