ಹುಬ್ಬಳ್ಳಿ: ಮನೆ ಮೇಲಿರುವ ಹಂಚನ್ನು ತೆಗೆದು ಒಳ ನುಗ್ಗಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚುತ್ತಿದ್ದ ಖದೀಮನನ್ನು ಕೇಶ್ವಾಪುರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಶರೀಫಸಾಬ್ ಹುಲಗುರ್ (23) ಬಂಧಿತ ಆರೋಪಿ. ಬಂಧಿತನಿಂದ ಒಟ್ಟು 3.9 ಲಕ್ಷ ಮೌಲ್ಯದ 103 ಗ್ರಾಂ ತೂಕದ ಆಭರಣ ಹಾಗೂ 56,000 ರೂ. ನಗದು ವಶಪಡಿಸಿಕೊಂಡಿದ್ದಾರೆ. ವಿನೋಬಾ ನಗರದಲ್ಲಿನ ರೈಲ್ವೆ ಇಲಾಖೆಗೆ ಸಂಬಂಧಿಸಿದ ಕ್ವಾಟರ್ಸ್ನಲ್ಲಿ ಕಳ್ಳತನವಾಗಿತ್ತು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು, ಖಚಿತ ಮಾಹಿತಿ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.
ಒಟ್ಟು ಮೂರು ಮನೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಕಳ್ಳತನ ಮಾಡಿದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದ ಮೇಲೆ ನಾರಾಯಣ ರಾಯ್ಕರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.