ETV Bharat / state

ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ: 12 ಕೇಸ್ ದಾಖಲು, 134 ಜನರ ಬಂಧನ - ಪೊಲೀಸ್ ಆಯುಕ್ತ - 12 cases registered in Old Hubli communal riots

ಹಳೇ ಹುಬ್ಬಳ್ಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಬೂರಾಮ್ ತಿಳಿಸಿದ್ದಾರೆ.

police-commissioner-laburam-spoke-on-hubli-riot
ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿದರು
author img

By

Published : Apr 21, 2022, 9:19 PM IST

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಕೇಸ್ ದಾಖಲು ಮಾಡಲಾಗಿದ್ದು, 134 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆ ತನಿಖೆ ಕೈಗೊಂಡಿದ್ದು, ಸೂಕ್ತ ಬಂದೋಬಸ್ತ್ ಜೊತೆಗೆ ನಾಳೆಯವರೆಗೂ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದರು.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶನಿವಾರ ರಾತ್ರಿ ನಡೆದ ಘಟನೆಯ ಮೂರು ನಾಲ್ಕು ಗಂಟೆಗಳ ಬಳಿಕ ಪರಿಸ್ಥಿತಿ ಶಾಂತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕಸಬಾ ಪೊಲೀಸ್ ಠಾಣೆ, ಕೇಶ್ವಾಪೂರ, ಬೆಂಡಿಗೇರಿ ಹಾಗೂ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತಷ್ಟು ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಬಂಧನ ಹಾಗೂ ವಿಚಾರಣೆ ತೀವ್ರವಾಗಿ ನಡೆದಿದ್ದು, ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಅವರು ಹೇಳಿದರು.

ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿದರು

ವಾಸೀಂ ಪಠಾಣ್ ಬಂಧನದ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಗಾವಿಯಿಂದ ವಾಸೀಂ ಪಠಾಣ್ ಅವರನ್ನು ಕರೆದುಕೊಂಡು ಬರಲಾಗಿದ್ದು, ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. ಅಭಿಷೇಕ ಹಿರೇಮಠ ಪರೀಕ್ಷೆ ಕುರಿತು ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಮಗೆ ನಿರ್ದೇಶನ ನೀಡಿದೆ. ಆ ಪ್ರಕಾರ ಬಂಧಿತ ಅಭಿಷೇಕ ಹಿರೇಮಠನನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಪರೀಕ್ಷೆಗೆ ಹಾಜರು ಪಡಿಸಲಾಗುತ್ತದೆ ಎಂದು ತಿಳಿಸಿದರು.

ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ: ಹೈಕೋರ್ಟ್​​ಗೆ ಬಿಬಿಎಂಪಿ ಮಾಹಿತಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.