ಹುಬ್ಬಳ್ಳಿ : ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಪೊಲೀಸ್ ಕಾನ್‌ಸ್ಟೆಬಲ್‌ವೊಬ್ಬರು ಟಾಟಾ ಏಸ್ ವಾಹನ ಚಾಲಕನಿಗೆ ಮನ ಬಂದಂತೆ ಥಳಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ವೆಂಕಣ್ಣ ಕಮತಗಿ ಎಂಬ ವ್ಯಕ್ತಿಯು ಹಲ್ಲೆಗೊಳಗಾಗಿದ್ದು, ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಗುಳೇಶ್ ಅವರ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಗುಳೇಶ್ ತನ್ನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನದೇ ಹವಾ ಇಟ್ಟಿದ್ದಾರೆ. ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದು ಆರೋಪಿಸಲಾಗಿದೆ.
ಕಳೆದ ಕೆಲವು ವರ್ಷಗಳಿಂದ ಇದೇ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗುಳೇಶ್, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿದ್ದಾರಂತೆ. ಈತ ಆಡಿದ್ದೇ ಆಟವಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.