ಧಾರವಾಡ : ಹು-ಧಾ ಪಾಲಿಕೆ ಚುನಾವಣೆ ಹಿನ್ನೆಲೆ ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿಯಾಗಿದ್ದಾರೆ. ನಿಂಗಪ್ಪ ಭೂಸಣ್ಣವರ (28) ಮೃತ ಕಾನ್ಸ್‌ಟೇಬಲ್ ಎಂದು ತಿಳಿದು ಬಂದಿದೆ.
ನಿಂಗಪ್ಪ ಭೂಸಣ್ಣವರ ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿಯಾಗಿದ್ದರು. ಧಾರವಾಡ-ಹುಬ್ಬಳ್ಳಿ ರಸ್ತೆಯ ಯಾಲಕ್ಕಿ ಶೆಟ್ಟರ್ ಕಾಲೋನಿ ಬಳಿ ಲಾರಿ ನಡುವೆ ಅಪಘಾತ ಸಂಭವಿಸಿ, ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಈ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.