ಹುಬ್ಬಳ್ಳಿ: ಕೆಪಿಎಸ್ಸಿ ಎಸ್‌ಡಿಎ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯೋರ್ವಳು ಎಲೆಕ್ಟ್ರಾನಿಕ್ ಸಾಧನ ಬಳಸಿ ನಕಲು ಮಾಡಿ ಸಿಕ್ಕಿಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ನಗರದ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿದ್ದ ಎಸ್‌ಡಿಎ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ವಸ್ತು ಬಳಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುತ್ತಿದ್ದಳು. ಈ ಸಂದರ್ಭದಲ್ಲಿ ಮೇಲ್ವಿಚಾರಕರ ತಪಾಸಣೆಯಲ್ಲಿ ಸಿಕ್ಕಿಬಿದ್ದಿದ್ದಾಳೆ. ವಿದ್ಯಾರ್ಥಿನಿ ಬಾಗಲಕೋಟೆ ಮೂಲದ ನಿಖಿತಾ ಕಲಾಲ್ ಎಂದು ತಿಳಿದುಬಂದಿದೆ.
ಪರೀಕ್ಷೆಯಲ್ಲಿ ಅಭ್ಯರ್ಥಿ ನಿಖಿತಾ ಕಲಾಲ್ ನಕಲು ಮಾಡಿರುವುದನ್ನು ಬಿಇಓ ಎಸ್.ಎಂ. ಹೊಡೆದಮನಿ ಪತ್ತೆ ಹಚ್ಚಿದ್ದು, ಇದೇ ವೇಳೆ ಪರೀಕ್ಷೆ ಬರೆಯಲು ಬಳಸಿದ ವಸ್ತುವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ವಸ್ತುಗಳನ್ನು ಕೆಪಿಎಸ್‌ಸಿಯ ಪರೀಕ್ಷಾ ಮಂಡಳಿಗೆ ಕಳುಹಿಸಿಕೊಟ್ಟಿದ್ದಾರೆ.