ETV Bharat / state

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ವಿಶ್ವೇಶ್ವರಯ್ಯ ಕಾಲೇಜು ಅಧ್ಯಕ್ಷ ಪೊಲೀಸರ ವಶಕ್ಕೆ - ಲೈಂಗಿಕ ಕಿರುಕುಳ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಅಧ್ಯಕ್ಷ ಬಸವರಾಜ ಯಡವಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಲೈಂಗಿಕ ದೌರ್ಜನ್ಯ
sexual assault case
author img

By

Published : Aug 26, 2022, 2:01 PM IST

ಧಾರವಾಡ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಅಧ್ಯಕ್ಷ ಬಸವರಾಜ ಯಡವಣ್ಣವರ ಅವರನ್ನು ಧಾರವಾಡ ಉಪನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಲೇಜಿನ ಅಧ್ಯಕ್ಷ ಬಸವರಾಜ ಅವರು ತಮ್ಮದೇ ಕಾಲೇಜಿನ ವಿದ್ಯಾರ್ಥಿನಿಯರನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿಯರು ಬಸವರಾಜ ಯಡವಣ್ಣವರ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಪ್ರೋತ್ಸಾಹಿಸಿದ ಕಾಲೇಜಿನ ಪ್ರಾಚಾರ್ಯ ಕುರುವತ್ತಿಗೌಡರ ವಿರುದ್ಧ ದೂರು ದಾಖಲಿಸಿದ್ದರು.

ದೂರು ದಾಖಲಾದ ಬಳಿಕ ಪ್ರಾಚಾರ್ಯ ಕುರುವತ್ತಿಗೌಡರ ಅವರನ್ನು ಪೊಲೀಸರು ಬಂಧಿಸಿದ್ದರು. ಆದರೆ, ಅಧ್ಯಕ್ಷ ಬಸವರಾಜ ತಲೆಮರೆಸಿಕೊಂಡಿದ್ದ. ಇದೀಗ ಕಾಲೇಜು ಅಧ್ಯಕ್ಷನನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: 10 ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ: 8 ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.