ಹುಬ್ಬಳ್ಳಿ: ಯುವಕರ ಮಧ್ಯೆ ಗಲಾಟೆಯಾಗಿ ಚಾಕುವಿನಿಂದ ಇರಿದು ಹೊಡೆದಾಡಿಕೊಂಡಿರುವ ಘಟನೆ ಕಲಘಟಗಿ ತಾಲೂಕಿನ ಕಾಮಧೇನು ಗ್ರಾಮದಲ್ಲಿ ನಡೆದಿದೆ. ಮೊದಲು ಒಬ್ಬ ಯುವಕ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ, ಮತ್ತಿಬ್ಬರು ಸೇರಿ ಅವನಿಗೆ ಚಾಕು ಹಾಕಿದ್ದಾರೆ. ಆ ಸಮಯದಲ್ಲಿ ಸ್ಥಳೀಯರೆಲ್ಲ ಸೇರಿ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಕಲಘಟಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಊರಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ: ತಲ್ಲಣಿಸಿದ ದಾವಣಗೆರೆ.. ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಈ ಗಲಾಟೆ ಯಾವ ವಿಚಾರವಾಗಿ ನಡೆಯಿತು. ಯುವಕರ ಹೆಸರು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.