ಧಾರವಾಡ : ಕೊರೊನಾ ಎರಡನೇ ಅಲೆ ನಡುವೆಯೇ ಪರೀಕ್ಷೆ ನಡೆಸಲು ಮುಂದಾದ ಖಾಸಗಿ ಶಿಕ್ಷಣ ಸಂಸ್ಥೆ ಮೇಲೆ ಉಪನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಧಾರವಾಡದ ಶ್ರೀನಗರ ವೃತ್ತದ ಬಳಿಯಿರುವ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಎಂಬ ಖಾಸಗಿ ಸಂಸ್ಥೆ ಪರೀಕ್ಷೆ ಆಯೋಜಿಸಿತ್ತು. ರ್ಯಾಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಪ್ರಚಾರ ಪಡೆಯಲು ಮುಂದಾಗಿತ್ತು. ಪರೀಕ್ಷೆ ಬರೆಯಲು ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದರು. ಆದರೆ, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಉಪನಗರ ಠಾಣೆ ಪೊಲೀಸರು ದಾಳಿ ಮಾಡಿ ಪರೀಕ್ಷೆಯನ್ನು ತಡೆ ಹಿಡಿದಿದ್ದಾರೆ.
ಓದಿ : ಹೊಸಪೇಟೆ: ಕೋವಿಡ್ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ
ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಹಲವು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡಿರಲಿಲ್ಲ, ಮಾಸ್ಕ್ ಧರಿಸಿರಲಿಲ್ಲ ಎಂದು ಹೇಳಲಾಗ್ತಿದೆ.