ಹುಬ್ಬಳ್ಳಿ: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ನಗರದ ಐವರು ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಇದೀಗ ಇವರ ವರದಿಗಳು ನೆಗೆಟಿವ್ ಬಂದಿದ್ದು ಇಲಾಖೆ ನಿರಾಳವಾಗಿದೆ.
ದಾವಣಗೆರೆ ಮೂಲದ ಕೊರೊನಾ ಸೋಂಕಿತ ಅನಾಥ ವೃದ್ಧೆಯ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಬೆಂಡಿಗೇರಿಯ ಮಹಿಳಾ ಪಿಎಸ್ಐ, ಎಎಸ್ಐ, ಹೆಡ್ ಕಾನ್ಸ್‌ಟೆಬಲ್ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ನಾಲ್ವರು ಸಿಬ್ಬಂದಿ ಸೇರಿ ಠಾಣೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಲ್ಲರ ವರದಿಯೂ ನೆಗೆಟಿವ್ ಬಂದಿದ್ದು, ಕ್ವಾರಂಟೈನ್ ಅವಧಿ ಪೂರೈಸಲು ಸೂಚಿಸಲಾಗಿದೆ ಎನ್ನಲಾಗುತ್ತಿದೆ.
ಆನಂದನಗರದ ಸೋಂಕಿತನ ಸಂಪರ್ಕ ಹೊಂದಿದ್ದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಹೆಡ್ ಕಾನ್ಸ್‌ಟೆಬಲ್ ಒಬ್ಬರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿತ್ತು. ಅವರ ವರದಿಯೂ ನೆಗೆಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.