ಧಾರವಾಡ: ಸ್ಟೋನ್ ಕ್ರಷರ್ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಸುಮಾರು 200 ಕೆ.ಜಿ ಜಿಲೆಟಿನ್ ಕಡ್ಡಿ ಸೇರಿದಂತೆ 700 ಎಲೆಕ್ಟ್ರಾನಿಕ್ ಡಿಟೊನೇಟರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನ ಅಮ್ಮಿನಬಾವಿಯಲ್ಲಿನ ದಯಾನಂದ ಮಾಸೂರ ಎಂಬುವವರಿಗೆ ಸೇರಿದ ಕ್ರಷರ್ನಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿದ್ದ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಕಾರ್ಯಾಚರಣೆ ವೇಳೆ ಸುಮಾರು 1,650 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದರು.
ಇದನ್ನೂ ಓದಿ: ಹಣದಿಂದ ಉನ್ನತ ಹುದ್ದೆ.. ಪಿಐಎಲ್ ದಾಖಲಿಸಿ ವಿಚಾರಣೆ ನಡೆಸಿ; ಸಿಜೆಗೆ ಏಕಸದಸ್ಯ ಪೀಠ ಮನವಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.