ಹುಬ್ಬಳ್ಳಿ : ನಗರದಲ್ಲಿ ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 50ಕ್ಕೂ ಹೆಚ್ಚು ಆಟೋಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗೋಕುಲ ರಸ್ತೆ ಸೇರಿದಂತೆ ವಿವಿದೆಡೆ ಕೋವಿಡ್ ಜನತಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ವಾಹನಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಂಡ ವಿಧಿಸಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿರುವವರ ಸಂಖ್ಯೆಯೂ ಜಾಸ್ತಿ ಇದೆ.
ಹಾಗಾಗಿ, ಗೋಕುಲರಸ್ತೆ ಠಾಣಾ ಇನ್ಸ್ಪೆಕ್ಟರ್ ಖಾಲಿ ಮಿರ್ಚಿ ಹಾಗೂ ಉಪನಗರ ಠಾಣಾ ಇನ್ಸ್ಪೆಕ್ಟರ್ ರವಿಚಂದ್ರನ್ ನೇತೃತ್ವದಲ್ಲಿ ಫೀಲ್ಡಿಗಿಳಿದ ಪೊಲೀಸರು ಆಟೋಗಳನ್ನು ಸೀಜ್ ಮಾಡಿದ್ದಾರೆ.