ಧಾರವಾಡ: ನೂಪುರ್ ಶರ್ಮಾ ಹೇಳಿಕೆ ವಿಚಾರ ಸಂಬಂಧ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಕೆಲವರು ಇದನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೆಲ ಕೋಮುವಾದಿಗಳು, ದೇಶದ್ರೋಹಿಗಳು ಕೋಮು ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದರು.
ಅಲ್ಲದೆ ಶಾಂತಿ ಕದಡುವ ಕೆಲಸವನ್ನು ಕೆಲ ವ್ಯಕ್ತಿಗಳು, ಸಂಘಟನೆಗಳು ಮಾಡುತ್ತಿವೆ. ಅದನ್ನು ನಿಲ್ಲಿಸಿ, ಶಾಂತಿ ಕಾಪಾಡೋಣ. ಪ್ರತಿಯೊಂದು ಧರ್ಮ, ವ್ಯಕ್ತಿಯನ್ನು ಗೌರವಿಸಬೇಕು. ಇದಕ್ಕೆ ನಮ್ಮ ಸರ್ಕಾರ, ಪಕ್ಷ ಬದ್ಧವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪ್ರಚಾರ ಚೆನ್ನಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಹೊರಟ್ಟಿ 7 ಸಲ ಆಯ್ಕೆಯಾಗಿದ್ದಾರೆ. ಅವರು ಶಿಕ್ಷಕರ ಧ್ವನಿಯಾಗಿದ್ದಾರೆ. ಶಿಕ್ಷಕರ ವಿಶ್ವಾಸ ಗಳಿಸಿದ್ದಾರೆ. ರಾಜ್ಯದಲ್ಲಿ ನಾಲ್ಕು ಪರಿಷತ್ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಓದಿ : ಪ್ರವಾದಿ ಕುರಿತು ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಮುಸ್ಲಿಂ ಮುಖಂಡರೊಂದಿಗೆ ಪೊಲೀಸರ ಸಭೆ