ETV Bharat / state

ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ - ಮಳೆ ಕೊರತೆ

ಯಾವ್ಯಾವ ತಾಲೂಕಿನಲ್ಲಿ ಮಳೆ ಕೊರತೆಯಾಗಿದೆಯೋ, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆಯೋ ಅಲ್ಲಿ ಶಾಸಕರ ನೇತೃತ್ವದಲ್ಲಿ ಟಾಸ್ಕ್​ ಫೋರ್ಸ್​ ರಚನೆ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
author img

By

Published : Jun 18, 2023, 5:58 PM IST

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

ಬಿಜೆಪಿಯವರೇ ಅಕ್ಕಿ ಕೊಡಿಸಿ ಅಂದ್ರೆ ಸರಿಯಲ್ಲ: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿ ಮಾತನಾಡಿದ ಅವರು, ಇದೀಗ ಛತ್ತೀಸ್‌ಘಡದಿಂದ ಅಕ್ಕಿ ತರ್ತೀವಿ ಅಂತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದು ಆದ್ರೆ ಸಾಕು. ಎಲ್ಲಿಂದ ತಗೋಬೇಕು, ಹೇಗೆ ತಗೋಬೇಕು ಅನ್ನೋ ಪ್ರಶ್ನೆ. ರಾಜ್ಯದ ರೈತರು ಅಕ್ಕಿ ಕೊಡೋಕೆ ಮುಂದೆ ಬಂದ್ರೆ ಮೊದಲನೇ ಪ್ರಾಶಸ್ತ್ಯ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಿಸಿ ಅನ್ನೋದು ಸರಿ ಅಲ್ಲ. ಹೆಚ್ಚುವರಿ 5 ಕೆಜಿ ಅಕ್ಕಿಗೆ ಎಷ್ಟು ಮೆಟ್ರಿಕ್ ಟನ್ ಅಕ್ಕಿ ಬೇಕು ಅಷ್ಟನ್ನು ಎಲ್ಲಾ ಕಡೆಯಿಂದ ಪಡೆದುಕೊಂಡು ಕೊಡುವಂತಹದ್ದು ಸರ್ಕಾರದ ಕರ್ತವ್ಯ. ಅಕಸ್ಮಾತ್ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದ್ರೆ ನಾವು ಪ್ರತಿಭಟನೆ ಮಾಡ್ತೀವಿ ಎಂದರು.

ರಾಜ್ಯದಲ್ಲಿ ಬರಗಾಲ ಇದೆ : ಮುಂದಿನ ಐದು ವರ್ಷದ ಅವಧಿಯವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅವರ ಆಪ್ತರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇತ್ತ ಅವರಿಗೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗುತ್ತಿಲ್ಲ. ಕೇವಲ ಒಂದು ಭರವಸೆಯನ್ನು ಮಾತ್ರ ಜಾರಿಗೆ ತಂದಿದ್ದಾರೆ. ಇನ್ನೂ ನಾಲ್ಕು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿಲ್ಲ. ಅವರಿಗೆ ಗೊಂದಲಗಳಿವೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. ಮಳೆ ನಿಂತಿದೆ, ಈ ವಾರ ಮಳೆ ಬರಲಿಲ್ಲ. ಹೀಗಾಗಿ ಮುಂಗಾರು ಸಂಪೂರ್ಣ ವಿಫಲವಾಗಿದೆ ಎಂದು ಬೊಮ್ಮಾಯಿ ಹೇಳಿದ್ರು.

ಜೂನ್ ತಿಂಗಳಲ್ಲಿ ಟ್ಯಾಂಕರ್ ತರುವಂತಹದ್ದನ್ನು ನೋಡಿರಲಿಲ್ಲ: ಮತ್ತು ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. 500 ಹಳ್ಳಿಗಳಿಗೆ ಕುಡಿಯೋ ನೀರಿನ ಸಮಸ್ಯೆ ಇದೆ. ಕೆಲವು ಕಡೆ ಟ್ಯಾಂಕರ್ ಅನ್ನು ತರುವಂತಹದ್ದು ಪ್ರಾರಂಭವಾಗಿದೆ. ಜೂನ್ ತಿಂಗಳಲ್ಲಿ ಟ್ಯಾಂಕರ್ ತರುವಂತಹದ್ದನ್ನು ನೋಡಿರಲಿಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ ಎಂದು ಮಾಜಿ ಸಿಎಂ ಟೀಕಿಸಿದರು.

ಶಾಸಕರ ನೇತೃತ್ವದಲ್ಲಿ ಟಾಸ್ಕ್ ​ಫೋರ್ಸ್ ರಚನೆ ಮಾಡಬೇಕು: ಯಾವ್ಯಾವ ತಾಲೂಕಿನಲ್ಲಿ ಮಳೆ ಕೊರತೆಯಾಗಿದೆಯೋ, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆಯೋ ಅಲ್ಲಿ ಕೂಡಲೇ ಶಾಸಕರ ನೇತೃತ್ವದಲ್ಲಿ ಟಾಸ್ಕ್​ ಫೋರ್ಸ್ ರಚನೆ ಮಾಡಬೇಕು. ಪ್ರಾರಂಭಿಕವಾಗಿ ಡಿಸಾಸ್ಟರ್​ ಮ್ಯಾನೇಜ್​ಮೆಂಟ್​ನಿಂದ ಒಂದೊಂದು ಕೋಟಿ ರೂ. ಬಿಡುಗಡೆ ಮಾಡಬೇಕು. ಡಿಸಿಯವರ ಪಿಡಿ ಅಕೌಂಟ್​ನಲ್ಲಿ ಹಣವಿದೆ, ಅದನ್ನೂ ಬಿಡುಗಡೆಗೊಳಿಸುತ್ತಿಲ್ಲ. ಅಲ್ಲಿ ಹೊಸ ಬೋರ್​ವೆಲ್​ಗಳನ್ನು ಕೊರೆಯಲು ಅವಕಾಶ ಕೊಟ್ಟಿಲ್ಲ. ಹಳೆಯ ಬೋರ್​ವೆಲ್​ಗಳನ್ನು ರೀಚಾರ್ಜ್​​ ಮಾಡಲು ಅವಕಾಶ ಕೊಟ್ಟಿಲ್ಲ ಎಂದರು.

ಜನರಿಗೆ ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರ್ಕಾರ ತೆಗೆದುಕೊಂಡು ಏನು ಮಾಡಬೇಕು ಎಂದ ಅವರು, ಸೆಷನ್ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತೆ ಎಂದರು.

ಇದನ್ನೂ ಓದಿ: ಅಕ್ಕಿ ವಿತರಣೆ ಗೊಂದಲ : ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.