ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗವಾದ ಬೆಳಗಾವಿಯಲ್ಲಿ ಒಮ್ಮೆಯೂ ಅಧಿವೇಶನ ನಡೆಸದೆ ಬಿಜೆಪಿ ಸರ್ಕಾರ ದಿವ್ಯ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ಜಂಟಿ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಿದರು.
ಬೆಂಗಳೂರಿನಲ್ಲಿ ನಡೆದ ಜಂಟಿ ಅಧಿವೇಶನ ಸಮಯದಲ್ಲಿ 'ಬೆಳಗಾವಿಯಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿರುವುದಕ್ಕೆ ಧಿಕ್ಕಾರ' ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದು ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಹಾಗೂ ವಿಜಯ ಸಿಂಗ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಿ, ಈ ಭಾಗದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಶಾಸಕರು ಒತ್ತಾಯಿಸಿದರು.