ಹುಬ್ಬಳ್ಳಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಭಾನುವಾರ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಾಗಿದ್ದು, ಇಂದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಎಲ್ಲ ಅಂಗಡಿ ಮುಂಗಟ್ಟಗಳು ಸಂಪೂರ್ಣ ಬಂದ್ ಆಗಿವೆ. ಎಲ್ಲಾ ರಸ್ತೆಗಳು ವಾಹನ ಸಂಚಾರವಿಲ್ಲದೆ ಬಣಗುಡತ್ತಿವೆ. ಪೊಲೀಸ್ ಸಿಬ್ಬಂದಿ ನಿನ್ನೆ ಸಂಜೆಯಿಂದಲೇ ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಇಂದು ತುರ್ತು ಸೇವೆ ಹೊರತುಪಡಿಸಿ ಉಳಿದ ಆಟೋ ಟ್ಯಾಕ್ಸಿ, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಬಹುತೇಕ ಸಂಚಾರ ವ್ಯವಸ್ಥೆ ಸಂಪೂರ್ಣ ನಿಂತಿದ್ದು ಹುಬ್ಬಳ್ಳಿ ಜನತೆ ಸ್ವಯಂ ಪ್ರೇರಿತರಾಗಿ ಲಾಕ್ಡೌನ್ ಆಗಿದ್ದರಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ.