ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಡಿ. 4ಕ್ಕೆ ಮುಂದೂಡಿಕೆಯಾಗಿದೆ.
ಯೋಗೇಶಗೌಡ ಹತ್ಯೆ ಪ್ರಕರಣ ಹಿನ್ನೆಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಬಂಧನದಲ್ಲಿದ್ದಾರೆ. ವಿನಯ ಕುಲಕರ್ಣಿ ಪರ ವಕೀಲರಿಂದ ನಿನ್ನೆ ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.
ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿನಯ್ ಪರ ವಕೀಲರು ವಾಪಸ್ ಪಡೆದಿದ್ದರು. ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಮತ್ತೆ ಡಿಸೆಂಬರ್ 4ಕ್ಕೆ ವಿಚಾರಣೆ ಮುಂದೂಡಿದೆ. ಸಿಬಿಐ ಪರ ವಕೀಲರಿಗೆ ತಕರಾರು ಅರ್ಜಿ ಸಲ್ಲಿಸಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ.