ಹುಬ್ಬಳ್ಳಿ: ನಾಯಕರಾದವರ ವೈಯಕ್ತಿಕ ಬದುಕು ಶುದ್ಧವಾಗಿರಬೇಕು. ನಮ್ಮದು ಶಿಸ್ತಿನ ಪಕ್ಷ. ಇವೆಲ್ಲಾ ಸಹಿಸಲ್ಲ, ಈ ಬಗ್ಗೆ ಪರೀಶಿಲನೆ ಮಾಡುತ್ತೇವೆ. ಮಾಧ್ಯಮಗಳಲ್ಲಿ ನಾನು ನೋಡಿದ್ದೇನೆ, ತಪ್ಪು ಮಾಡಿದ್ದರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಜೊತೆಯೂ ಮಾತನಾಡುತ್ತೇನೆ. ನಾಳೆ ದೆಹಲಿಯಲ್ಲಿ ರಾಷ್ಟ್ರ ನಾಯಕರು ಭೇಟಿಯಾಗುತ್ತಾರೆ. ಎಲ್ಲವನ್ನೂ ಒಮ್ಮೆ ತಿಳಿದುಕೊಂಡು ಅವರ ಗಮನಕ್ಕೂ ತರುತ್ತೇನೆ. ನನಗೆ ಪೂರ್ಣ ಮಾಹಿತಿ ಇಲ್ಲದಿರುವುದರಿಂದ ರಾಜೀನಾಮೆ ಬಗ್ಗೆ ನಂತರ ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ... ಏನ್ ಹೇಳಿದ್ರು!?