ಧಾರವಾಡ/ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಕೋಟಿ ಕಂಠ ಗಾಯನ ಎಂಬ ವಿನೂತನ ಅಭಿಯಾನ ಆರಂಭಿಸಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಗಮನ ಸೆಳೆಯಿತು.
ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಕ್ಕಳ ಜೊತೆ ಹೆಜ್ಜೆ ಹಾಕಿದರು.
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕರಾದ ಅರವಿಂದ ಬೆಲ್ಲದ್, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೇರಿದಂತೆ ಇತರ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.
ಇದನ್ನೂ ಓದಿ: ವಿಶ್ವ ದಾಖಲೆ ನಿರ್ಮಿಸಿದ ಕೋಟಿ ಕಂಠ ಗಾಯನ: ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಹಾಡಿಗೆ ದನಿಯಾದ ಸಿಎಂ
ವಾಣಿಜ್ಯನಗರಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಜನಸಾಗರವೇ ಸಾಕ್ಷಿಯಾಯಿತು. ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೋಟಿಕಂಠ ಗಾಯನಕ್ಕೆ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದರು.
ಇನ್ನೂ ವಿಶ್ವೇಶ್ವರ ನಗರದ ಪಿರಾಮಿಡ್ ಧ್ಯಾನ ಮಂದಿರಲ್ಲಿಯೂ ಕೂಡ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು. ಅಲ್ಲಿಯೂ ಕೂಡ ನೂರಾರು ಜನರು ಕನ್ನಡ ಹಾಡು ಹಾಡಿ ಸಂಭ್ರಮಿಸಿದರು.