ETV Bharat / state

ಭ್ರಷ್ಟಾಚಾರದ ಕುರಿತು ಡಿಕೆಶಿ ಮಾತನಾಡುತ್ತಿರುವುದು ಹಾಸ್ಯಾಸ್ಪದ: ಪ್ರಹ್ಲಾದ್ ಜೋಶಿ - ಡಿಕೆಶಿ ಭ್ರಷ್ಟಾಚಾರ

ಕಾಂಗ್ರೆಸ್ಸಿಗರು ತಾವೇ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದ್ದು, ಬಿಜೆಪಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹೇಳುವ ನೈತಿಕತೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

joshi
joshi
author img

By

Published : Oct 30, 2020, 3:02 PM IST

ಹುಬ್ಬಳ್ಳಿ: ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಅವರು ಮಾತನಾಡುವುದು ಹಾಸ್ಯಾಸ್ಪದವಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಅವರು ಬೇಲ್ ಮೇಲೆ ಹೊರಗಡೆ ಇದ್ದಾರೆ. ಮೊದಲು ಅದನ್ನು ಡಿಕೆಶಿ ಅರಿತುಕೊಳ್ಳಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇದು ಕಾಂಗ್ರೆಸ್ಸಿಗರ ದೊಡ್ಡ ಸಮಸ್ಯೆ ಎಂದರೆ, ತಾವೇ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡು, ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದರು.

ಪ್ರಹ್ಲಾದ್ ಜೋಶಿ ತಿರುಗೇಟು

ಪುಲ್ವಾಮಾ ದಾಳಿ ಕುರಿತು ಪಾಕಿಸ್ತಾನ ಪಾರ್ಲಿಮೆಂಟ್​ನಲ್ಲಿ ಸಚಿವರೊಬ್ಬರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಅಲ್ಲಿನ ಮಂತ್ರಿಗಳೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಪುಲ್ವಾಮಾ ದಾಳಿ ಕುರಿತು ಇಲ್ಲಿನ ಕಾಂಗ್ರೆಸ್ ಪಕ್ಷದವರು ಸಾಕ್ಷಿ ಕೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಈ ಬಗ್ಗೆ ಪಾಕಿಸ್ತಾನದವರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆ ಮಾಡುತ್ತಿದೆ ಎಂದು ಜಾಗತಿಕ ವೇದಿಕೆಯಲ್ಲಿ ನಾವು ಹೇಳುತ್ತಿದ್ದೆವು. ಈಗ ಅವರೇ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಯುರೋಪ್ ರಾಷ್ಟದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ವಿಚಾರದ ಕುರಿತು ಮಾತನಾಡಿದ ಜೋಷಿ, ಭಾರತದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ. ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ‌ನಾವು ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ‌ದೇಶದಲ್ಲಿ ಮತ್ತೆ ಲಾಕ್​ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.