ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ನಾಯಕತ್ವ ಬದಲಾವಣೆ ವಿಚಾರ ಮಾಧ್ಯಮಗಳಲ್ಲಿ ಪದೇ ಪದೆ ಚೆರ್ಚೆಗೆ ಬರುತ್ತಿದೆ. ಸಿಎಂ ಅವರಿಂದ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆಯೂ ಪಕ್ಷದ ಮುಂದಿಲ್ಲ. ಕೋವಿಡ್ ಸಂಕಷ್ಟದ ಕಾಲದಲ್ಲಿ, ಈ ವಯಸ್ಸಿನಲ್ಲೂ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದಾರೆ, ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಚಾರವಿಲ್ಲ. ಈ ಬಗ್ಗೆ ಹೈಕಮಾಂಡ್‌ನಿಂದಲೂ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಎಂದರು.
ಇದನ್ನೂ ಓದಿ: ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿಎಸ್ವೈ