ಧಾರವಾಡ: ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಕೇಸ್ ದಾಖಲಿಸಿದ್ದಕ್ಕೆ ಸದನದಲ್ಲಿ ಗದ್ದಲ ಎಬ್ಬಿಸಿದ ಶಾಸಕ ಸಂಗಮೇಶ್ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಈ ಕುರಿತು ಧಾರವಾಡದ ನಿವಾಸದಲ್ಲಿ ಮಾತನಾಡಿರುವ ಅವರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗಿದ ಹಿಂದೂ ಕಾರ್ಯಕರ್ತರ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಈ ಕುರಿತು ಭದ್ರಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ ಮಧ್ಯೆ ಎರಡು ದಿನದ 'ಒಂದು ದೇಶ, ಒಂದು ಚುನಾವಣೆ' ಮೇಲಿನ ಚರ್ಚೆ ಅಪೂರ್ಣ
ಜೈ ಶ್ರೀರಾಮ ಎಂದು ಘೋಷಣೆ ಕೂಗಿದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಭದ್ರಾವತಿ ಶಾಸಕರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀರಾಮಸೇನೆ ಮುಖಂಡ ಮುತಾಲಿಕ್ ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಸಹ ಮುತಾಲಿಕ್ ಕಿಡಿ ಕಾರಿದ್ದು, ಸದನದಲ್ಲಿ ಅಸಭ್ಯ ವರ್ತನೆಯನ್ನು ಖಂಡಿಸಿದ್ದಾರೆ. ಸಭಾಪತಿಗೆ ಅಭಿನಂದನೆ ಸಲ್ಲಿಸಿದ ಅವರು ಅಮಾನತು ಮಾಡಿರುವುದು ಯೋಗ್ಯವಾದ ವಾದ ಕ್ರಮವಾಗಿದೆ ಎಂದಿದ್ದಾರೆ.