ETV Bharat / state

ನನಗೆ ಬಿಜೆಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ: ಪ್ರಮೋದ್ ಮುತಾಲಿಕ್ ವಿಶ್ವಾಸ - HUbballi news

ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆಯೋ ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದಿದ್ದಾರೆ.

Pramod muthalik react about Blegavi by election ticket
ಪ್ರಮೋದ್ ಮುತಾಲಿಕ್
author img

By

Published : Mar 22, 2021, 3:05 PM IST

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ವಿಚಾರ ಹಿನ್ನೆಲೆ ನಾನು ಬಿಜೆಪಿ ಎಲ್ಲ ಪ್ರಮುಖರನ್ನು ಭೇಟಿ ಮಾಡಿದ್ದೇನೆ. ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ‌ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯಿಂದ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಎಲ್ಲರೂ ಸಹ ಕೋರ್ ಕಮೀಟಿ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದರು.

ಬೆಳಗಾವಿ ಉಪಚುನಾವಣೆ ಕುರಿತು ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ

ಶೇ.90 ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ರಾಜಕೀಯ ಬೆಳವಣಿಗೆ ಆಗಬಹುದು. ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಯಾರಿಗೆ ಟಿಕೆಟ್ ಸಿಗುತ್ತದೆಯೋ ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ನೂರು ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ಹಿಂಡಲಗಾ ಮಹಾಲಕ್ಷ್ಮಿ ಜಾತ್ರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.