ಧಾರವಾಡ : ತಾಲೂಕಿನ ಬೋಗೂರ ಗ್ರಾಮದಲ್ಲಿ ಯುವಕನಿಂದ ಅತ್ಯಾಚಾರಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ ಕುಟುಂಬಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರಕರಣವನ್ನು ಶ್ರೀರಾಮಸೇನೆ ಗಂಭೀರವಾಗಿ ಪರಿಗಣಿಸಿದೆ. ನಾವು ಬಾಲಕಿಯ ಕುಟುಂಬಕ್ಕೆ ಆದ ಅನ್ಯಾಯ ಖಂಡಿಸುತ್ತೇವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಅಂದಾಗ ಬಾಲಕಿ ಆತ್ಮಕ್ಕೆ ಶಾಂತಿ ಸಿಗುತ್ತೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೂ ಮುತಾಲಿಕ್ ಇದೇ ವೇಳೆ ಧೈರ್ಯ ತುಂಬಿದರು.