ETV Bharat / state

ಮಳೆಹಾನಿ ಕುರಿತು ಮುನ್ನೆಚ್ಚರಿಕೆ ವಹಿಸಲಾಗಿದೆ.. ಜೀವಹಾನಿಯಾಗಿಲ್ಲ: ಧಾರವಾಡ ಡಿಸಿ - Dharwad

ಗ್ರಾಮ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಮಳೆಯಿಂದ ತೊಂದರೆಗೊಳಗಾದ ಸಾರ್ವಜನಿಕರಿಗೆ ತಕ್ಷಣಕ್ಕೆ ನೆರವಾಗಲು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅಗತ್ಯ ಕ್ರಮ ವಹಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

Dharwad
ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ
author img

By

Published : Jul 24, 2021, 12:04 AM IST

ಧಾರವಾಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಇಲ್ಲಿಯವರೆಗೆ ಯಾವುದೇ ರೀತಿ ಜೀವಹಾನಿ ಉಂಟಾಗಿಲ್ಲ. ಇಂದು ಪ್ರವಾಹದಲ್ಲಿ ಸಿಲುಕಿದ್ದ ಸುಮಾರು 9 ಜನರನ್ನು ಹಾಗು 495 ಕುರಿಗಳನ್ನು ರಕ್ಷಿಸಲಾಗಿದೆ. ಜಿಲ್ಲೆಯಲ್ಲಿ ನೆರೆ, ಪ್ರವಾಹ ಪರಿಹಾರ ಕೈಗೊಳ್ಳಲು ಯಾವುದೇ ಆರ್ಥಿಕ ಕೊರತೆಯಿಲ್ಲ. ಜಿಲ್ಲಾಡಳಿತದಲ್ಲಿ ಸುಮಾರು 1.61 ಕೋಟಿ‌ ರೂ ಇದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಮುಖ್ಯಮಂತ್ರಿಗಳೊಂದಿಗೆ ನೆರೆ ಪ್ರವಾಹ ಕುರಿತು ನಡೆದ ವಿಡಿಯೋ ಸಂವಾದದ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಮಳೆ ಹಾನಿ ಹಾಗು ಸಾರ್ವಜನಿಕರ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ಕೈಗೊಂಡು ಪ್ರತಿ ತಾಲೂಕಿಗೆ ಓರ್ವ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದರು.

ಗ್ರಾಮ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಮಳೆಯಿಂದ ತೊಂದರೆಗೊಳಗಾದ ಸಾರ್ವಜನಿಕರಿಗೆ ತಕ್ಷಣಕ್ಕೆ ನೆರವಾಗಲು ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅಗತ್ಯ ಕ್ರಮ ವಹಿಸಲು ಆದೇಶಿಸಲಾಗಿದೆ. ತಹಶೀಲ್ದಾರರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿನ ತಗ್ಗು ಪ್ರದೇಶ, ಹಳ್ಳ ಮತ್ತು ತೊರೆಗಳ ಪಕ್ಕದ ಪ್ರದೇಶಗಳಲ್ಲಿ ಜಾಗೃತಿ ವಹಿಸುವಂತೆ ಖುದ್ದಾಗಿ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಳ್ನಾವರ ತಾಲೂಕು:

ಅಳ್ನಾವರ ತಾಲೂಕಿನಲ್ಲಿರುವ ಹುಲಿಕೇರಿಯ ಇಂದಿರಮ್ಮನ ಕೆರೆಯ ಒಂದು ಭಾಗಕ್ಕೆ ನಿರ್ಮಿಸಿದ್ದ ತಡೆಗೋಡೆ ಸೋರಿಕೆಯಾಗಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹೊರಹೋಗುತ್ತಿದೆ. ಪಟ್ಟಣದ ತಗ್ಗು ಪ್ರದೇಶದಲ್ಲಿ ನೆರೆ ಪ್ರವಾಹ ಉಂಟಾಗುವ ಸಾಧ್ಯತೆ ಇರುವುದರಿಂದ ಸುಮಾರು 200 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಕ್ರಮ ವಹಿಸಲಾಗಿದೆ. ಜತೆಗೆ ಪಟ್ಟಣದ ಎರಡು ಸ್ಥಳಗಳಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಕಾಳಜಿ ಕೇಂದ್ರ ಆರಂಭಿಸಲು ಆರು ಸ್ಥಳಗಳನ್ನು ಗುರುತಿಸಲಾಗಿದೆ.

ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವ ಕುಂಬಾರಗಣವಿ ರಸ್ತೆ ಸಂಪರ್ಕ ಕಡಿತವಾಗಿದ್ದು, ಮಳೆ ಕಡಿಮೆಯಾದ ನಂತರ ಮತ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಹಾಗೂ ಇಂದು ಬೆಳಿಗ್ಗೆ ಅತೀಯಾದ ಪ್ರವಾಹ ಬಂದಿದ್ದರಿಂದ ನಾಲ್ಕು ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮಧ್ಯಾಹ್ನದ ನಂತರ ಮತ್ತೆ ಮರಳಿ ಬಂದಿವೆ ಎಂದು ಅವರು ತಿಳಿಸಿದರು.

ಹುಲಿಕೇರಿ ಇಂದಿರಮ್ಮನ ಕೆರೆ ದುರಸ್ತಿಗಾಗಿ ಮರು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಇನ್ನು ಎರಡ್ಮೂರು ದಿನಗಳವರೆಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮವಹಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಇದ್ದು ಕ್ರಮ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ನವಲಗುಂದ ತಾಲೂಕು:

ನವಲಗುಂದ ತಾಲೂಕಿನ ಮೊರಬ-ಗುಮ್ಮಗೋಳ ರಸ್ತೆ ಬಂದ್ ಆಗಿರುವುದರಿಂದ ಬೆಣ್ಣೆಹಳ್ಳದಲ್ಲಿ ಇಂದು ಬೆಳಿಗ್ಗೆ 350 ಕುರಿಗಳು ಹಾಗೂ 8 ಜನ ಕುರಿಗಾಹಿಗಳು ಸಿಲುಕಿರುವ ಬಗ್ಗೆ ಮಾಹಿತಿ ಬಂದಿತ್ತು. ತಕ್ಷಣ ಅಗ್ನಿಶಾಮಕ ದಳದವರು ಹಾಗೂ ತಹಶೀಲ್ದಾರರು ಕ್ರಮವಹಿಸಿ ಅವರೆಲ್ಲರನ್ನು ರಕ್ಷಿಸಿ ಸುರಕ್ಷಿತವಾಗಿ ಕಾಪಾಡಿದ್ದಾರೆ. ಸುಮಾರು 15 ಕುರಿಗಳು ನೀರಿನಲ್ಲಿ ತೇಲಿ ಹೋಗಿವೆ ಎಂದು ತಿಳಿದು ಬಂದಿದ್ದು, ಈ ಕುರಿತು ಪಶುಪಾಲನೆ ಇಲಾಖೆಯ ಅಧಿಕಾರಿಗಳಿಗೆ ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ನವಲಗುಂದ ಪಟ್ಟಣದಲ್ಲಿ ನಾಲ್ಕು ಹಾಗೂ ಎಲ್ಲ ಗ್ರಾಮಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತಾಲೂಕು ಆಡಳಿತಕ್ಕೆ ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕುಂದಗೋಳ ತಾಲೂಕು:
ಕುಂದಗೋಳ ತಾಲೂಕಿನ ದೇವನೂರ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 180 ಕುರಿಗಳನ್ನು ರಕ್ಷಿಸಲಾಗಿದೆ. ಕೂಬಿಹಾಳ ಗ್ರಾಮದಲ್ಲಿ ಸುಮಾರು 20 ಮನೆಗಳ ಜನರನ್ನು ಸ್ಥಳಾಂತರಿಸಲಾಗಿದ್ದು, ಅವರ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ಮತ್ತು ಅಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧಗೊಳಿಸಲಾಗಿದೆ. ಕಲಘಟಗಿ ಹಾಗೂ ಧಾರವಾಡ, ಹುಬ್ಬಳ್ಳಿ ತಾಲೂಕಿನಲ್ಲಿ ಮಳೆ ನಿರಂತರವಾಗಿದ್ದು, ವಿವಿಧ ಗ್ರಾಮಗಳಲ್ಲಿ ಕೆಲವು ಮನೆಗಳು ಭಾಗಶ: ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಈವರೆಗೆ ಯಾವುದೇ ರೀತಿಯ ಹೆಚ್ಚಿನ ಹಾನಿ ಉಂಟಾಗಿರುವುದಿಲ್ಲ.

ಸುಮಾರು 21 ಸಾವಿರ ಹೆಕ್ಟೇರ್ ಕೃಷಿ ಬೆಳೆ ಭಾಗಶಃ ಜಲಾವೃತ:

ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದರಿಂದ ನಿರೀಕ್ಷೆಗಿಂತ ಹೆಚ್ಚು ಭೂಮಿಯಲ್ಲಿ ಬಿತ್ತನೆಯಾಗಿತ್ತು. ಆದರೆ ಈಗ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಈವರೆಗೆ ಸುಮಾರು 21,732 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆ ಭಾಗಶ: ಜಲಾವೃತವಾಗಿದೆ. ಮುಖ್ಯವಾಗಿ 1,675 ಹೆಕ್ಟೇರ್ ಸೋಯಾಬೀನ್​​, 6,684 ಹೆಕ್ಟೇರ್ ಗೋವಿನಜೋಳ, 1,646 ಹೆಕ್ಟೇರ್ ಹೆಸರುಕಾಳು, 106 ಹೆಕ್ಟೇರ್ ಶೇಂಗಾ ಬೆಳೆ ಹಾಗೂ 813 ಹೆಕ್ಟೇರ್ ಹತ್ತಿಬೆಳೆ ಅತೀ ತೇವಾಂಶದಿಂದ ಹಾನಿಯಾಗಿದೆ.

16 ಸೇತುವೆ, 52 ಕಿ.ಮೀ ರಸ್ತೆ ಭಾಗಶಃ ಹಾನಿ:

ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ನಿರ್ವಹಣೆಯಲ್ಲಿರುವ ವಿವಿಧ ತಾಲೂಕುಗಳಲ್ಲಿನ ಸುಮಾರು 16 ಸೇತುವೆಗಳು ಭಾಗಶ: ಹಾನಿಯಾಗಿದ್ದು, ಸಂಚಾರಕ್ಕೆ ಮುಕ್ತವಾಗಿವೆ. 25 ಕಿ.ಮೀ. ರಾಜ್ಯ ರಸ್ತೆ ಹಾಗೂ 27 ಕಿ.ಮೀ. ಜಿಲ್ಲಾ ರಸ್ತೆ ಭಾಗಶ: ಹಾನಿಯಾಗಿದ್ದು, ಮಳೆ ನಿಂತ ನಂತರ ದುರಸ್ತಿ ಮಾಡಲಾಗುವುದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

16 ರಸ್ತೆಗಳ ಸಂಪರ್ಕ ತಾತ್ಕಾಲಿಕ ಕಡಿತ:

ವಿವಿಧ ತಾಲೂಕುಗಳಲ್ಲಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 16 ರಸ್ತೆಗಳು ಅತೀಯಾದ ಮಳೆಯಿಂದಾಗಿ ತಾತ್ಕಾಲಿಕವಾಗಿ ಬಂದ್ ಆಗಿವೆ. ಮಳೆ ಕಡಿಮೆಯಾದಂತೆ ರಸ್ತೆಯ ಮೇಲಿನ ನೀರು ಸರಿದು ಸಂಚಾರಕ್ಕೆ ಮುಕ್ತವಾಗಲಿದೆ. ಅಲ್ಲಿಯವರೆಗೆ ಸಾರ್ವಜನಿಕರು ಈ ಸ್ಥಳಗಳಲ್ಲಿ ಸಂಚರಿಸದಂತೆ ಜಾಗೃತಿ ಮೂಡಿಸಲಾಗಿದೆ.

158 ಶಾಲೆ, 130 ಅಂಗನವಾಡಿ ಕೇಂದ್ರಗಳಲ್ಲಿ ನೀರು ಸೋರಿಕೆ:

ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಸುಮಾರು 158 ಶಾಲೆಗಳ ಶಾಲಾ ಕಟ್ಟಡ ಹಾಗೂ 130 ಅಂಗನವಾಡಿ ಕೇಂದ್ರಗಳು ಅತೀ ತೇವಾಂಶದಿಂದಾಗಿ ಸೋರುತ್ತಿವೆ ಎಂದು ಅವರು ತಿಳಿದರು.

561 ಮನೆಗಳು ಭಾಗಶಃ ಹಾನಿ:

ನಿರಂತರ ಮಳೆಯಿಂದಾಗಿ ಇಲ್ಲಿಯವರೆಗೆ ಜಿಲ್ಲೆಯ ಮಹಾನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಸುಮಾರು 561 ಮನೆಗಳು ಭಾಗಶಃ ಹಾನಿಯಾಗಿವೆ. ಇಂದು ಒಂದೇ ದಿನ 191 ಮನೆಗಳು ಭಾಗಶಃ ಹಾನಿಯಾಗಿವೆ. ಒಂದು ಜಾನುವಾರು ಮೃತಪಟ್ಟಿದ್ದು, ಪರಿಹಾರ ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳೊಂದಿಗಿನ ಸಂವಾದ:

ಮುಖ್ಯಮಂತ್ರಿಗಳು ನೆರೆಪೀಡಿತ 8 ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓ ಜತೆಗೆ ನೆರೆ, ಪ್ರವಾಹ ಕುರಿತು ವಿಡಿಯೋ ಸಂವಾದ ನಡೆಸಿ ಮುಂದಿನ 24 ಗಂಟೆ ಮಳೆ ಕುರಿತು ಅಲರ್ಟ್ ಇರುವಂತೆ ನಿರ್ದೇಶನ ನೀಡಿದರು. ಯಾವುದೇ ಜೀವಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ರಸ್ತೆ, ಸೇತುವೆ, ಕಾಳಜಿ ಕೇಂದ್ರಗಳು ಅಗತ್ಯವಿದ್ದಲ್ಲಿ ತಕ್ಷಣ ಕ್ರಮವಹಿಸುವಂತೆ ಸೂಚಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.