ಹುಬ್ಬಳ್ಳಿ: ತೀವ್ರ ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಫರೀದಾ ಬಾನು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ತಾಯಿ. ಕುಂದಗೋಳ ತಾಲೂಕಿನ ಗುರುವಿನಹಳ್ಳಿಯಿಂದ ಹುಬ್ಬಳ್ಳಿಯ ಕಿಮ್ಸ್‌ಗೆ ಬರುವಾಗ,ಮಾರ್ಗಮಧ್ಯದಲ್ಲೇ ಹೆರಿಗೆ ನೋವು ಹೆಚ್ಚಾಗಿದೆ. ಆಗ 108 ವಾಹನದ ವೈದ್ಯ ಪರುಶುರಾಮನ ಅವರು ಹೆರಿಗೆ ಮಾಡಿಸಿದ್ದಾರೆ. ನಂತರ ಹುಬ್ಬಳ್ಳಿಯ ಕಿಮ್ಸ್‌ಗೆ 108 ಸಿಬ್ಬಂದಿ ನವಜಾತ ಅವಳಿ ಶಿಶುಗಳು ಹಾಗೂ ತಾಯಿಯನ್ನು ದಾಖಲಿಸಿದ್ದಾರೆ. ಆ್ಯಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.