ETV Bharat / state

ಗ್ರಾಪಂ ಚುನಾವಣೆ: ಧಾರವಾಡದ ಆಯಾ ತಾಲೂಕುಗಳಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ - ಗ್ರಾಮ ಪಂಚಾಯತ್ ಚುನಾವಣೆಗಳ ಮತ ಏಣಿಕೆ

7 ತಾಲೂಕಿನ ಮತ ಎಣಿಕೆ ಕೇಂದ್ರಗಳಲ್ಲಿ 744 ಸಿಬ್ಬಂದಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಕ್ತಾಯವಾಗುವವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಲು ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

counting
counting
author img

By

Published : Dec 28, 2020, 9:33 PM IST

ಧಾರವಾಡ: ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯವು ಡಿಸೆಂಬರ್ 30ರಂದು ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕಿನ ಕೇಂದ್ರ ಸ್ಥಾನದಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ನಡೆಯಲಿದ್ದು, 7 ತಾಲೂಕಿನ ಮತ ಎಣಿಕಾ ಕೇಂದ್ರಗಳಲ್ಲಿ 744 ಸಿಬ್ಬಂದಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಕ್ತಾಯವಾಗುವವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತ ಎಣಿಕೆಗಾಗಿ 7 ಮತ ಎಣಿಕೆ ಕೇಂದ್ರಗಳನ್ನು ಗುರುತಿಸಲಾಗಿದ್ದು, 248 ಕೌಂಟಿಂಗ್ ಸುಪರ್​ವೈಸರ್ ಮತ್ತು 496 ಕೌಂಟಿಂಗ್ ಸಹಾಯಕರಿಗೆ ಮತ ಎಣಿಕೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.

preparation for election counting
ಮತ ಎಣಿಕೆಗೆ ಸಕಲ ಸಿದ್ಧತೆ

ಧಾರವಾಡ ತಾಲೂಕಿನ 34 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ಧಾರವಾಡ ನಗರದ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಲಿದ್ದು, 68 ಜನ ಕೌಂಟಿಂಗ್ ಸುಪರ್​ವೈಸರ್ ಮತ್ತು 136 ಕೌಂಟಿಂಗ್ ಸಹಾಯಕರನ್ನು ಈ ಕಾರ್ಯಕ್ಕಾಗಿ ನೇಮಿಸಲಾಗಿದೆ.

ಅಳ್ನಾವರ ತಾಲೂಕಿನ 4 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಏಣಿಕೆಯು ಅಳ್ನಾವರ ಪಟ್ಟಣದ ಕಾಶೆನಟ್ಟಿ ರಸ್ತೆಯ ಜ್ಯೋತಿ ನಗರದಲ್ಲಿ ಬರುವ ಸೆಂಟ್ ಥೆರೆಸಾ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸೆಂಟ್ ಥೆರೆಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.

ಹುಬ್ಬಳ್ಳಿ ತಾಲೂಕಿನ 26 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ಹುಬ್ಬಳ್ಳಿಯ ಲ್ಯಾಮಿಂಗಟನ್ ಸ್ಕೂಲ್‍ನಲ್ಲಿ ನಡೆಯಲಿದೆ.

preparation for election counting
ಮತ ಎಣಿಕೆಗೆ ಸಕಲ ಸಿದ್ಧತೆ

ಕಲಘಟಗಿ ತಾಲೂಕಿನ 27 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕುಂದಗೋಳ ತಾಲೂಕಿನ 23 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲ್ಲಿದೆ.
ನವಲಗುಂದ ತಾಲೂಕಿನ 14 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ನವಲಗುಂದ ಪಟ್ಟಣದ ಮಾಡೆಲ್ ಎಜುಕೇಶನ್ ಬೋರ್ಡ ಬಾಲಕೀಯರ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

ಅಣ್ಣಿಗೇರಿ ತಾಲೂಕಿನ 8 ಗ್ರಾಮ ಪಂಚಾಯತಿಗಳ ಚುನಾವಣೆಯ ಮತಗಳ ಎಣಿಕೆಯು ಅಣ್ಣಿಗೇರಿ ಪಟ್ಟಣದ ಶ್ರೀ ಮಹದೇವಪ್ಪ ಬಸಲಿಂಗಪ್ಪ ಹಳ್ಳಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗೆ ಆಯಾ ತಾಲೂಕಿನ ಕೇಂದ್ರ ಸ್ಥಳದಲ್ಲಿ ಇಂದು ತರಬೇತಿ ನೀಡಲಾಗಿದೆ. ಆಯಾ ತಾಲೂಕಿನ ತಹಶೀಲ್ದಾರರು ಹಾಗೂ ನೋಡಲ್ ಅಧಿಕಾರಿಗಳು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.