ETV Bharat / state

ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ: ಚುನಾಯಿತ ಪ್ರತಿನಿಧಿಗಳ ಆಗಮನಕ್ಕೆ ಕಾರ್ಪೊರೇಷನ್ ಸಜ್ಜು

ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು ಬಂದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆ ಚುನಾವಣೆ ಸಮೀಪಿಸುತ್ತಿದೆ. ಕೆಲವೊಂದು ಗೊಂದಲಗಳು ನಿವಾರಣೆಗೊಂಡು ಚುನಾವಣೆ ದಿನಾಂಕ ನಿಗದಿಯಾಗಬೇಕಿದೆ.

hubli-dharwad
ಹು-ಧಾ ಮಹಾನಗರ ಪಾಲಿಕೆ ಚುನಾವಣೆ
author img

By

Published : Jul 19, 2021, 1:31 PM IST

ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ - ಧಾರವಾಡ ಮಹಾನಗರ ‌ಪಾಲಿಕೆ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ರಾಜಕೀಯ ಪಕ್ಷಗಳು ಮಾತ್ರವಲ್ಲ ಮಹಾನಗರ ಪಾಲಿಕೆಯಲ್ಲಿಯೂ ಸಿದ್ಧತೆಗಳು ಭರದಿಂದ ಸಾಗಿವೆ. ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು ಬಂದಿರುವ ಮಹಾನಗರ ಪಾಲಿಕೆಗೆ ಚುನಾವಣೆ ಸಮೀಪಿಸುತ್ತಿದೆ.

ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ

ಇನ್ನೇನು ಕೆಲವೊಂದು ಗೊಂದಲಗಳು ನಿವಾರಣೆಗೊಂಡು ಚುನಾವಣೆ ದಿನಾಂಕ ನಿಗದಿಯಾಗಬೇಕಿದೆ. ಅಲ್ಲದೇ ಈಗಾಗಲೇ ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ, ಪ್ರಜಾಕೀಯ ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದ್ದು, ಇನ್ನೊಂದು ಕಡೆ ಮಹಾನಗರ ಪಾಲಿಕೆ ಸಿದ್ದತೆ ನಡೆಸಿದೆ.

ಚುನಾಯಿತ ಜನಪ್ರತಿನಿಧಿಗಳಿಗೆ ಜವಾಬ್ದಾರಿ ವಹಿಸಲು ಪಾಲಿಕೆ ಕೂಡ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಪಾಲಿಕೆ ಕೂಡ ಸರ್ಕಾರ ನಿರ್ದೇಶನದ ಮೇರೆಗೆ ಚುನಾವಣೆ ನಡೆಸಲು ತುದಿಗಾಲಿನಲ್ಲಿ ನಿಂತಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇನ್ನೂ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಿಂದೆ 67 ವಾರ್ಡ್​ಗಳಿದ್ದವು. ಅವುಗಳನ್ನು ಮರು ವಿಂಗಡಿಸಿ 82 ವಾರ್ಡ್​ಗಳನ್ನಾಗಿ ಮಾಡಲಾಗಿದೆ. ಆದರೆ, ಇದರಲ್ಲಿ ಕೆಲ ವಾರ್ಡ್​ಗಳಲ್ಲಿ ಮತದಾರರ ಪಟ್ಟಿಯ ಕುರಿತು ರಾಜಕೀಯ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಿಟ್ ಅರ್ಜಿ ಕೂಡ ಹೈಕೋರ್ಟ್​ಗೆ ಸಲ್ಲಿಸಿದ್ದಾರೆ. ಇದೆಲ್ಲದರ ನಡುವೆಯೂ ಪಾಲಿಕೆಯು ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರ ಕೋವಿಡ್ ನಿರ್ದೇಶನ ಮೇಲೆ ಚುನಾವಣೆಗೆ ಭರದ ಸಿದ್ಧತೆ ನಡೆಸಿದ್ದು, ಅವಳಿ ನಗರದಲ್ಲಿ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ.

ಒಟ್ಟಿನಲ್ಲಿ‌ ಅವಳಿ ನಗರದಲ್ಲಿ 8,13,257 ಜನ ಮತದಾರರು ಈ ಬಾರಿ ಮತ ಚಲಾವಣೆ ಮಾಡಲಿದ್ದು, ಎಲ್ಲ ಮತದಾರರು ಕೂಡ ತಮ್ಮ ಹಕ್ಕನ್ನು ಚಲಾವಣೆ ಮಾಡಲು ಹು-ಧಾ ಅವಳಿ ನಗರದ ಪಾಲಿಕೆ ಸಕಲ ಸಿದ್ಧತೆಗಳನ್ನು ಮಾಡುತ್ತಿದೆ. ಕೂಡಲೇ ಸರ್ಕಾರ ಸೂಕ್ತ ನಿರ್ದೇಶನ ನೀಡಿ ಚುನಾವಣೆ ದಿನಾಂಕ ಘೋಷಣೆ ಮಾಡಬೇಕಿದೆ. ಅಲ್ಲದೇ ಗೊಂದಲದಲ್ಲಿ ಕೋರ್ಟ್ ಮೆಟ್ಟಿಲು ಏರಿರುವ ಪ್ರಕರಣಗಳು ಇತ್ಯರ್ಥಗೊಂಡು ಚುನಾವಣೆ ನಡೆಯಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.