ETV Bharat / state

ಪೌರ ಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ: ರಾಷ್ಟ್ರಪತಿ ದ್ರೌಪದಿ ಮುರ್ಮು - ಕರ್ನಾಟಕ ಜಿಮ್‌ಖಾನಾ ಮೈದಾನ

ಹುಬ್ಬಳ್ಳಿ - ಧಾರವಾಡ ಜನರ ಪ್ರೀತಿಯು ನನ್ನನ್ನು ಪುಳಕಿತಗೊಳಿಸಿದೆ. ಇದು ಭಾರತದ ರಾಷ್ಟ್ರಪತಿಗೆ ಸಂದ ಸನ್ಮಾನ ಮಾತ್ರವಲ್ಲ; ಇದು ಇಡೀ ದೇಶದ ಮಹಿಳೆಯರಿಗೆ ಸಂದ ಸನ್ಮಾನವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಮಾನ ವ್ಯಕ್ತಪಡಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸನ್ಮಾನ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸನ್ಮಾನ
author img

By

Published : Sep 26, 2022, 3:21 PM IST

ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಓಡಿಶಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಹೇಳಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ ಮಾಡಲಾಯಿತು ಮಾತನಾಡಿರುವುದು

ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹುಬ್ಬಳ್ಳಿ- ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ, ಸಮಗ್ರ ಭಾರತದ ಸಾಂಸ್ಕೃತಿಕ, ಐತಿಹಾಸಿಕ ನಗರಗಳಾಗಿವೆ. ಉತ್ತರ ಕರ್ನಾಟಕದ ಈ ನಗರಗಳಲ್ಲಿ ಕನ್ನಡ, ಮರಾಠಿ ಭಾಷೆಗಳ ಅದ್ಭುತ ಸಂಗಮವಿದೆ. ಅಧ್ಯಾತ್ಮ, ಸಾಂಸ್ಕೃತಿಕ, ಶೈಕ್ಷಣಿಕ ಮಾತ್ರವಲ್ಲ, ಆಧುನಿಕವಾಗಿಯೂ ಈ ನಗರಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಉತ್ತರ ಕರ್ನಾಟಕವು ಸಾಂಸ್ಕೃತಿಕ, ಆಧ್ಯಾತ್ಮಿಕತೆ ಹಾಗೂ ಶೈಕ್ಷಣಿಕ ಸಾಧನೆ ಹಾಗೂ ಆಧುನಿಕ ಸೌಲಭ್ಯಗಳಿಂದ ದೇಶದಲ್ಲಿ ‌ಹೆಸರುವಾಸಿಯಾಗಿದೆ. ಪ್ರಾಚೀನ ಸಾಧನೆಯ ಜೊತೆಗೆ ಅಧುನಿಕತೆಯ ಅಭಿವೃದ್ದಿಗೆ ತೆರೆದುಕೊಂಡಿದೆ.

ಇಡೀ‌ ಮಹಿಳಾ ವರ್ಗಕ್ಕೆ ಸಂದ ಸನ್ಮಾನ: ಹುಬ್ಬಳ್ಳಿ - ಧಾರವಾಡ ಜನರ ಪ್ರೀತಿಯು ನನ್ನನ್ನು ಪುಳಕಿತಗೊಳಿಸಿದೆ. ಇದು ಭಾರತದ ರಾಷ್ಟ್ರಪತಿಗೆ ಸಂದ ಸನ್ಮಾನ ಮಾತ್ರವಲ್ಲ; ಇದು ಇಡೀ ದೇಶದ ಮಹಿಳೆಯರಿಗೆ ಸಂದ ಸನ್ಮಾನವಾಗಿದೆ ಎಂದು ರಾಷ್ಟ್ರಪತಿ ಮುರ್ಮು ಅವರು ಅಭಿಮಾನ ವ್ಯಕ್ತಪಡಿಸಿದರು.

ಇಡೀ ಭಾರತದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಉಲ್ಲೇಖನೀಯವಾಗಿದೆ. ಪ್ರಾಚೀನತೆ ಮತ್ತು ಆಧುನಿಕತೆಯ ಸಂಗಮವಾಗಿರುವ ಹುಬ್ಬಳ್ಳಿ-ಧಾರವಾಡ ಶಿಕ್ಷಣ ಸಂಸ್ಥೆಗಳ‌ ಮೂಲಕ ವಿದ್ಯಾದಾನ ಮಾಡುವ ಮೂಲಕ ವಿದ್ಯಾಕಾಶಿಯಾಗಿ ಹೊರಹೊಮ್ಮಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರಸನ್ಮಾನ

ಸಾಹಿತ್ಯ ಕ್ಷೇತ್ರದಲ್ಲಿ ದ. ರಾ ಬೇಂದ್ರೆ, ವಿ. ಕೃ ಗೋಕಾಕ್​​ ಅವರ ಕೊಡುಗೆ ಸ್ಮರಿಸಿದ ಅವರು, ಸಂಗೀತ ಕ್ಷೇತ್ರದಲ್ಲಿ ಭೀಮಸೇನ್ ಜೋಶಿ, ಪಂಡಿತ ಬಸವರಾಜ ರಾಜಗುರು ಮತ್ತಿತರರ ಸಾಧನೆ ಉಲ್ಲೇಖಿಸಿದರು. ಸಂತ‌ ಬಸವೇಶ್ವರ, ಸಿದ್ಧಾರೂಢ ಮಹಾರಾಜರ ಆಧ್ಯಾತ್ಮಿಕ ಮಾರ್ಗದಿಂದ ಈ‌ ಕ್ಷೇತ್ರವು ಧನ್ಯವಾಗಿದೆ ಎಂದರು.

ಕಿತ್ತೂರು ಚೆನ್ನಮ್ಮ , ನರಗುಂದ ಬಾಬಾಸಾಹೇಬ್ ಸ್ವಾತಂತ್ರ್ಯ ಹೋರಾಟ, ತ್ಯಾಗ ಬಲಿದಾನ ಸ್ಮರಿಸಿದ ಗೌರವಾನ್ವಿತ ರಾಷ್ಟ್ರಪತಿಯವರು, ಈ ಭಾಗದಲ್ಲಿ ಶಿಕ್ಷಣ ಹಾಗೂ‌ ಲೋಕಕಲ್ಯಾಣದ ಕಾರ್ಯ ಹೀಗೆ ಮುಂದುವರಿಯಲಿ ಎಂದು ಆಶಯ ವ್ಯಕ್ತಪಡಿಸಿದರು.

ರಾಷ್ಟ್ರಪತಿಗೆ ಸಿದ್ಧಾರೂಢರ ಮೂರ್ತಿ ನೆನಪಿನ ಕಾಣಿಕೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪೌರಸನ್ಮಾನ

ಹುಬ್ಬಳ್ಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮವನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಸನ್ಮಾನದ ವೇದಿಕೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ರಾಷ್ಟ್ರಪತಿಗೆ ಸಿದ್ಧಾರೂಢರ ಮೂರ್ತಿ ನೆನಪಿನ ಕಾಣಿಕೆ.. ಪೌರ ಸನ್ಮಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವಳಿನಗರಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉತ್ತರ ಕರ್ನಾಟಕದ ಆರಾಧ್ಯ ದೈವ ಸಿದ್ಧಾರೂಢರ ವಿಗ್ರಹವನ್ನು ಕಾಣಿಕೆಯಾಗಿ ನೀಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

900 ಗ್ರಾಂ ತೂಕದ ಬೆಳ್ಳಿ ವಿಗ್ರಹ ಹಾಗೂ ಯಾಲಕ್ಕಿ ಹಾರದ ಮೂಲಕ ಖಾದಿ ಶಾಲ್ ಹೊದಿಸಿ ಪೌರ ಸನ್ಮಾನ ಮಾಡಲಾಯಿತು. ಹುಬ್ಬಳ್ಳಿ - ಧಾರವಾಡ‌ ಮಹಾನಗರ ಪಾಲಿಕೆ ವತಿಯಿಂದ ಪೌರ ಸನ್ಮಾನ ಮಾಡಲಾಗಿದ್ದು, ಐತಿಹಾಸಿಕ ಘಟನೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಸಾಕ್ಷಿಯಾಗಿದೆ.

ರಾಜ್ಯಪಾಲ ಥಾವರ್ಚಂ​ದ್ ಗೆಹ್ಲೋಟ್​​, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಸಚಿವರಾದ ಭೈರತಿ ಬಸವರಾಜ, ಶಂಕರ ಪಾಟೀಲ ಮುನೇನಕೊಪ್ಪ, ಹಾಲಪ್ಪ ಆಚಾರ್​, ಮಾಜಿ ಸಿಎಂ ಜಗದೀಶ ಶೆಟ್ಟರ್​, ಶಾಸಕ ಅರವಿಂದ ಬೆಲ್ಲದ್​, ಪ್ರಸಾದ್​ ಅಬ್ಬಯ್ಯ, ಅಮೃತ ದೇಸಾಯಿ ಹಾಗೂ ಮೇಯರ್ ಈರೇಶ ಅಂಚಟಗೇರಿ ಉಪಸ್ಥಿತರಿದ್ದರು.

ಓದಿ: ಕನ್ನಡದಲ್ಲಿ ಭಾಷಣ ಆರಂಭಿಸಿದ ರಾಷ್ಟ್ರಪತಿ.. ಚಾಮುಂಡಿ ಮಹಿಳಾ ಶಕ್ತಿಯ ಪ್ರತೀಕ ಎಂದ ಮುರ್ಮು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.