ETV Bharat / state

ಮಾಧುಸ್ವಾಮಿ ರಾಜೀನಾಮೆಗೆ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಒತ್ತಾಯ - ಸಚಿವ ಮಾದುಸ್ವಾಮಿ ಅವಾಚ್ಯ ಶಬ್ದ

ಕೋಲಾರ ತಾಲೂಕಿನ ಎಸ್ ಅಗ್ರಹಾರದಲ್ಲಿ ಕೆರೆಗಳ ಒತ್ತುವರಿಗೆ ಮನವಿ ಮಾಡಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಸದಸ್ಯೆಯ ವಿರುದ್ಧ ಸಚಿವ ಮಾಧುಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಖಂಡನೀಯ ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

Pressure from Kalasa Banduri Farmers' Struggle Committee activists on Madhuswami's resignation.
ಮಾಧುಸ್ವಾಮಿ ರಾಜೀನಾಮೆ ಕುರಿತು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಕಾರ್ಯಕರ್ತರಿಂದ ಒತ್ತಡ
author img

By

Published : May 22, 2020, 6:05 PM IST

ಹುಬ್ಬಳ್ಳಿ: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ರೈತ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದನ್ನು ಖಂಡಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ನಗರದ ತಹಶಿಲ್ದಾರ್​​ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದ ಅವರು, ಕೋಲಾರ ತಾಲೂಕಿನ ಎಸ್ ಅಗ್ರಹಾರದಲ್ಲಿ ಕೆರೆಗಳ ಒತ್ತುವರಿಗೆ ಮನವಿ ಮಾಡಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಸದಸ್ಯೆಯ ವಿರುದ್ಧ ಸಚಿವ ಮಾದುಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಕಾರ್ಯಕರ್ತರಿಂದ ಒತ್ತಡ.

ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಇಂತಹ ಕೆಳಮಟ್ಟದ ಪದ ಬಳಕೆ ಮಾಡಿದ್ದು ಎಷ್ಡರ ಮಟ್ಟಿಗೆ ಸರಿ? ರೈತ ಮಹಿಳೆ ನಳಿನಿ ಮೇಲಿನ ಅವಮಾನ ನಿಜಕ್ಕೂ ಖಂಡನೀಯ. ಮಹಿಳಾ ಹೋರಾಟಗಾರರಿಗೆ ಇಂತಹ ಪದಗಳನ್ನು ಬಳಿಸಿರುವ ಮಾಧುಸ್ವಾಮಿ ಅವರನ್ನು ರಾಜ್ಯ ಸರ್ಕಾರ ಕೂಡಲೇ ಸಚಿವ ಸ್ಥಾನದಿಂದ ಕೈ ಬಿಡಬೇಕು, ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ‌ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.