ಧಾರವಾಡ: ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬಸ್ ಕ್ಲೀನರ್ ಮೃತಪಟ್ಟ ದಾರುಣ ಘಟನೆ ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿದ್ದಾರೆ. ಚಾಲಕನನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತ ಸಂಭವಿಸಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ: ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ.. ಪ್ರಧಾನಿ ಮೋದಿ ಘೋಷಣೆ