ಹುಬ್ಬಳ್ಳಿ : ಲಾಕ್‌ಡೌನ್ ಇರುವುದರಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಸರ್ಕಾರಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ನಗರದಲ್ಲಿ ಶೇ.90ರಷ್ಟು ಖಾಸಗಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಒಪಿಡಿ ಬಂದ್ ಇರುವುದರಿಂದ ಹೊರ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಖಾಸಗಿ ಆಸ್ಪತ್ರೆಗಳಿಂದ ಸೂಕ್ತ ಚಿಕಿತ್ಸೆ ಸಿಗದೆ ಮನೆ ಮದ್ದಿಗೆ ಜನ ಮುಂದಾಗಿದ್ದಾರೆ. ಕೇವಲ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ, ಕೆಮ್ಮು, ನೆಗಡಿ, ಮಧುಮೇಹ, ಅಧಿಕ ರಕ್ತದೊತ್ತಡ, ಮಂಡಿನೋವು ಸೇರಿ ಇನ್ನಿತರ ಸಮಸ್ಯೆಗಳಿಗೆ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.