ಧಾರವಾಡ: ರಾಜ್ಯ ಸರ್ಕಾರದ ವಿರುದ್ಧ ಅನುದಾನ ರಹಿತ ಖಾಸಗಿ ಶಾಲಾ ಸಂಸ್ಥೆಗಳು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಎದುರು ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದವು.
ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆಗಳ ನೇತೃತ್ವದಲ್ಲಿ ಈ ಧರಣಿ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರು ಈ ಕುರಿತಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಶೇ.60 ರಷ್ಟು ಖಾಸಗಿ ಶಾಲೆಗಳು ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿವೆ. ಆದರೆ ಸರ್ಕಾರ ಖಾಸಗಿ ಶಾಲೆಗಳನ್ನು ಕಡೆಗಣಿಸುತ್ತಿದೆ. ಈ ಸಮಯದಲ್ಲಿ ಶಾಲೆಗಳನ್ನು ಮೇಲೆತ್ತುವ ಪ್ರಯತ್ನ ಮಾಡಬೇಕು. ಶಿಕ್ಷಣ ಸಚಿವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಪಾಲಕರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ. ಮೊದಲು ಅವರು ನಿಯಮಗಳನ್ನು ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.