ETV Bharat / state

ಪಾಕ್​ ಪರ ಘೋಷಣೆ ಕೂಗಿದ್ದ ಮೂವರ ವಿದ್ಯಾರ್ಥಿಗಳ ವಿಚಾರಣೆ ಮಾರ್ಚ್ 10ಕ್ಕೆ ಮುಂದೂಡಿಕೆ

author img

By

Published : Feb 3, 2021, 1:44 PM IST

Updated : Feb 3, 2021, 2:22 PM IST

ಪಾಕ್​ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಫೆ. 15ರಂದು ಬೆಳಕಿಗೆ ಬಂದಿತ್ತು. ದೇಶದ್ರೋಹ ಪ್ರಕರಣವನ್ನು ದಾಖಲಿಸಿ ಮೂವರು ವಿದ್ಯಾರ್ಥಿಗಳನ್ನು ಜೈಲಿನಲ್ಲಿ ಇರಿಸಲಾಗಿತ್ತು ನಂತರ ಬೇಲ ಮೇಲೆ ಹೊರಬಿಡಲಾಗಿತ್ತು.

Pro-Pak slogan Postponement of three students hearing to March 10
ಪಾಕ್​ ಪರ ಘೋಷಣೆ ಕೂಗಿದ್ದ ಮೂವರ ವಿದ್ಯಾರ್ಥಿಗಳ ವಿಚಾರಣೆ ಮಾರ್ಚ್ 10ಕ್ಕೆ ಮುಂದೂಡಿಕೆ

ಹುಬ್ಬಳ್ಳಿ : ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್​ಇ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಇಂದು ಹುಬ್ಬಳ್ಳಿಯ 5ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆ ಇಂದು ಹಾಜರಾಗಿದ್ದ ವಿದ್ಯಾರ್ಥಿಗಳು, ಪೊಲೀಸ್ ಬಿಗಿ ಭದ್ರತೆಯಲ್ಲಿ ಮೂವರು ವಿದ್ಯಾರ್ಥಿಗಳಾದ ಅಮೀರ್, ಬಾಸಿತ್ ಹಾಗೂ ತಾಲೀಬ್​ನನ್ನು ಕೋರ್ಟ್​​​​ಗೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ಹುಬ್ಬಳ್ಳಿಯ 5ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಮಾರ್ಚ್ 10ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಪಾಕ್​ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ಫೆ. 15ರಂದು ಬೆಳಕಿಗೆ ಬಂದಿತ್ತು. ದೇಶದ್ರೋಹ ಪ್ರಕರಣವನ್ನು ದಾಖಲಿಸಿ ಮೂವರು ವಿದ್ಯಾರ್ಥಿಗಳನ್ನು ಜೈಲಿನಲ್ಲಿ ಇರಿಸಲಾಗಿತ್ತು ನಂತರ ಜಾಮೀನಿನ ಮೇಲೆ ಅವರನ್ನ ಬಿಡುಗಡೆ ಮಾಡಲಾಗಿತ್ತು. ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್ ಹಾಗೂ ತಾಲೀಬ್​ನನ್ನು ಹುಬ್ಬಳ್ಳಿಯ ಎರಡನೇ ಜೆ.ಎಂ.ಎಫ್‌.ಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಅವರ ಮೇಲೆ ದಾಳಿ ನಡೆದಿತ್ತು. ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ ಚಪ್ಪಲಿ ತೂರಿದ್ದರು.

ಓದಿ : ಸಿಎಂ ಔತಣಕೂಟಕ್ಕೆ ಗೈರಾದ ಬಿಜೆಪಿ ಶಾಸಕರು ಹೇಳಿದ್ದೇನು?

Last Updated : Feb 3, 2021, 2:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.