ETV Bharat / state

ಪಾಕ್​ ಪರ ಘೋಷಣೆ ಪ್ರಕರಣ: ಆರೋಪಿಗಳು ಹಿಂಡಲಗಾ ಜೈಲಿಗೆ ಶಿಫ್ಟ್​ - ಹಿಂಡಲಗಾ ಕಾರಾಗೃಹ

ಪಾಕಿಸ್ತಾನ ಪರ‌ ಘೋಷಣೆ ಕೂಗಿದ ಆರೋಪಿಗಳನ್ನು ಇಂದು ಬೆಳಗ್ಗೆ ಹುಬ್ಬಳ್ಳಿಯ ಉಪ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿದೆ.

Pro Pakisthan proclamation case
ಪಾಕ್​ ಪರ ಘೋಷಣೆ ಪ್ರಕರಣ
author img

By

Published : Feb 18, 2020, 12:24 PM IST

Updated : Feb 18, 2020, 1:13 PM IST

ಹುಬ್ಬಳ್ಳಿ: ಪಾಕಿಸ್ತಾನ ಪರ‌ ಘೋಷಣೆ ಕೂಗಿದ ನಗರದ ಕೆಎಲ್‌ಇ‌ ಇಂಜಿನಿಯರಿಂಗ್ ‌ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲಾಗಿದೆ.‌

ಪಾಕ್​ ಪರ ಘೋಷಣೆ ಪ್ರಕರಣ: ಆರೋಪಿಗಳನ್ನ ಹಿಂಡಲಗಾ ಕಾರಾಗೃಹಕ್ಕೆ ಶಿಪ್ಟ್

ನಿನ್ನೆ 3ನೇ ಜೆ ಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ಅಮಿರ್ ,ಬಾಸಿತ್, ತಾಲಿಬ್ ಅವರನ್ನು ಮಾ. 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ನಗರದ ಉಪ ಕಾರಾಗೃಹಕ್ಕೆ ಕಳುಹಿಸಿಕೊಡಲಾಗಿತ್ತು.

ನಿನ್ನೆ ಕೋರ್ಟ್ ನಿಂದ ಜೈಲಿಗೆ ಕಳುಹಿಸುವಾಗ ಕೋರ್ಟ್​ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಜೈಲಿನಲ್ಲಿಯೂ ತಮ್ಮ ಮೇಲೆ ಹಲ್ಲೆ ನಡೆಯಬಹುದು ಎಂಬ ಆತಂಕದಿಂದ ರಾತ್ರಿಯಿಡೀ ನಿದ್ದೆ ಮಾಡದೇ ಭಯದಿಂದ ಕುಳಿತುಕೊಂಡಿದ್ದರು ಎನ್ನಲಾಗಿದೆ.

ಹೀಗಾಗಿ‌ ಇಂದು ಬೆಳಗ್ಗೆ ಹುಬ್ಬಳ್ಳಿಯ ಉಪ ಕಾರಾಗೃಹ ದಿಂದ ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಆರೋಪಿಗಳನ್ನು ಶಿಫ್ಟ್​ ಮಾಡಲಾಗಿದೆ. ಜೈಲಿನ ಅಂದೇರಿ ಸೆಲ್​ನಲ್ಲಿ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಇರಿಸಲಾಗಿದೆ. ಬೇರೆ ಕೈದಿಗಳಿಂದ ಹಲ್ಲೆ ಭೀತಿ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಜೈಲಿನ ಸಿಬ್ಬಂದಿ, ಒಂದೇ ಸೆಲ್​ನಲ್ಲಿ ಇರಿಸಿದ್ದಾರೆ..

Last Updated : Feb 18, 2020, 1:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.