ಧಾರವಾಡ: ಡಾ.ದ.ರಾ. ಬೇಂದ್ರೆ ಅವರ ಜನ್ಮದಿನ ನಿಮಿತ್ತ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಅನುವಾದಕ, ಚಿಂತಕ ಪ್ರೊ. ಎಚ್.ಎಸ್. ಶಿವಪ್ರಕಾಶ ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ತಿಳಿಸಿದ್ದಾರೆ.

ಓದಿ:ಚಿನ್ನದ ಸರ ಮರಳಿಸಿದ ಬಸ್ ಚಾಲಕ, ನಿರ್ವಾಹಕರಿಗೆ ಸನ್ಮಾನ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಂದ್ರೆ ಅವರ 125ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2021ನೇ ಸಾಲಿನ ಪ್ರಶಸ್ತಿಗೆ ಶಿವಪ್ರಕಾಶ ಭಾಜನರಾಗಿದ್ದಾರೆ. ಪ್ರಶಸ್ತಿಯು 1 ಲಕ್ಷ ರೂ. ಮೊತ್ತ, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದರು.