ಹುಬ್ಬಳ್ಳಿ : ನಗರದ ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಕೇಶ್ವಾಪುರ ಠಾಣೆ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಹಣದ ಆಮಿಷವೊಡ್ಡಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡಸುತ್ತಿದ್ದ ಖಚಿತ ಮಾಹಿತಿ ಸಿಕ್ಕಿತ್ತು ಎನ್ನಲಾಗ್ತಿದೆ. ಇದರ ಅಧಾರದ ಮೇಲೆ ಭವಾನಿ ನಗರದ ರಾಮ ರೆಸಿಡೆನ್ಸಿ ಮೇಲೆ ದಾಳಿ ಮಾಡಿ ಲಾಡ್ಜ್ ಮ್ಯಾನೇಜರ್ ರಾಘವೇಂದ್ರನನ್ನ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಪೆಕ್ಟರ್ ಯು.ಹೆಚ್. ಸಾತೇನಳ್ಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.