ETV Bharat / state

ಸಿಎಎ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ - hubli protest against caa

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ವತಿಯಿಂದ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

Protest against CAA by writing a letter to central government through blood
ಸಿಎಎ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ
author img

By

Published : Jan 29, 2020, 5:47 PM IST

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ವತಿಯಿಂದ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಎಎ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ

ಸಿಎಎ ಹಾಗೂ ಎನ್.ಆರ್.ಸಿ, ದೇಶದ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದ್ದು, ಎಷ್ಟು ಮನವಿ ಸಲ್ಲಿಸಿದರೂ ಕೂಡ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ನಮ್ಮ ನೆತ್ತರು ಹರಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಾರತ ದೇಶದ ಮೂಲನಿವಾಸಿಗಳೆಂದರೆ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಹಿಂದುಳಿದ ಜನಾಂಗದವರು. ಅವರನ್ನು ತೀವ್ರವಾಗಿ ಸಂಕಷ್ಟಕ್ಕೆ ತಳ್ಳಲಿರುವ ಈ ಸಂವಿಧಾನ ವಿರೋಧಿ ಪೌರತ್ವ ತಿದ್ದುಪಡಿಯನ್ನು ದೇಶದ ಕೋಟ್ಯಾಂತರ ಜನರು ವಿರೋಧಿಸುತ್ತಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಜಾರಿಗೊಳಿಸಿರುವುದು ಖಂಡನೀಯವಾಗಿದೆ ಎಂದು ರಕ್ತ ಲಿಖಿತ ಪತ್ರದ ಮೂಲಕ ಅಸಮಾಧಾನ ಹೊರಹಾಕಿದರು.

ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ಥಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ಯಾವುದಾದರೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಿ ಅಂಕಿ ಅಂಶಗಳನ್ನು ಬಹಿರಂಗಪಡಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇನ್ನೂ ಈ ಪ್ರತಿಭಟನೆಯಲ್ಲಿ ಅನ್ವರ ಮುಧೋಳ, ಅಶ್ರಫ್ ಅಲಿ, ಮೋಹನ ಹಿರೇಮನಿ, ಬಾಬಾಜಾನ ಮುಧೋಳ, ಆಶಿಫ್ ಪಾಚಾಪೂರ ಸೇರಿದಂತೆ ಇತರರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.