ಧಾರವಾಡ : ಹಿಂದಿ ದಿವಸ ಅಚರಣೆಗೆ ನಾಡಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾವಚಿತ್ರಕ್ಕೆ ಕಪ್ಪು ಮಸಿ ಎರಚಿ ಕರವೇ ಪ್ರತಿಭಟನೆ ನಡೆಸಿದೆ.
ಧಾರವಾಡ ಹಿಂದಿ ಪ್ರಚಾರ ಸಭಾ ಎದುರಿನ ಬ್ಯಾನರ್‌ನಲ್ಲಿನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾವಚಿತ್ರಕ್ಕೆ ಕರವೇ ಜಿಲ್ಲಾಧ್ಯಕ್ಷ ಪರಮೇಶ ಕಾಳೆ ಕಪ್ಪು ಮಸಿ ಬಳಿದಿದ್ದಾರೆ.
ಇನ್ನು, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಡಿಸಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಆಡಳಿತದಲ್ಲಿ ಹಿಂದಿ ಹೇರಿಕೆ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಲುವು ಖಂಡನೀಯ. ಈ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.