ಧಾರವಾಡ: ತಾಂಡವ್ ಹಿಂದಿ ವೆಬ್ ಸಿರೀಸ್ನಲ್ಲಿ ಹಿಂದೂ ದೇವತೆಗಳಿಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡದ ಜುಬ್ಲಿ ವೃತ್ತದಲ್ಲಿ ಸಿರೀಸ್ ನಿರ್ಮಾಪಕ ಹಾಗೂ ನಿರ್ದೇಶಕರ ಪ್ರತಿಕೃತಿ ದಹಿಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಕೆಲವೊತ್ತು ಪ್ರತಿಭಟಿಸಿದ್ದಾರೆ. ವೆಬ್ ಸೀರಿಸ್ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ ಅದರಲ್ಲಿ ನಟಿಸಿರುವ ನಟ, ನಟಿ ಮೇಲೆ ಕ್ರಿಮಿನಲ್ ಕೇಸ್ ದಾಖಲಸಿ ಕೂಡಲೇ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ತಾಂಡವ್ ಸೀರಿಸ್ ಅನ್ನು ಈ ಕೂಡಲೇ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.